
ಬೆಳಗಾವಿ, 21 ಜೂನ್ (ಹಿ.ಸ.) :
ಆ್ಯಂಕರ್ : ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನವರು ದೊಡ್ಡ ಪ್ರಮಾಣದ ಹಣದ ಆಮಿಷ ಒಡ್ಡಿದ್ದರಿಂದ ಕೆಲವರು ಅಡ್ಡ ಮತದಾನ ಮಾಡಿದ್ದಾರೆ. ಇದು ಬಿಜೆಪಿಗೆ ಎಚ್ಚರಿಕೆಯ ಗಂಟೆ. ಈ ಥರದ ಮುಖ್ಯಮಂತ್ರಿ ಇದ್ದಾಗ ಬಹಳ ಜಾಗೃತೆಯಿಂದ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಳಗಾವಿಯ ನ್ಯೂ ಗೂಡ್ಸ್ ಶೆಡ್ ರಸ್ತೆಯಲ್ಲಿ ಜನಕಲ್ಯಾಣ ಟ್ರಸ್ಟ, ಬೆಳಗಾವಿ ಇವರ ವತಿಯಿಂದ ನಿರ್ಮಿಸಲಾದ ಶ್ರೀ ಜಗನ್ನಾಥರಾವ್ ಜೋಶಿ ಸ್ಮಾರಕ ಭವನದ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಡ್ಡ ಮತದಾನದ ತನಿಖೆ ನಡೆಸಲು ಪಕ್ಷದ ವತಿಯಿಂದ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ವರದಿ ಬಂದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಇದು ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ. ಈ ಥರದ ಮುಖ್ಯಮಂತ್ರಿ ಇದ್ದಾಗ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.