ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ಬೆಂಗಳೂರು, 21 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರು ನಗರದ ನಾಗಸಂದ್ರ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮಧ್ಯಾಹ್ನ ಸಣ್ಣ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದ್ದು, ತಕ್ಷಣದ ಕ್ರಮದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಬಿಎಂಆರ್ಸಿಎಲ್ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಮಧ್ಯಾಹ್ನ ಸುಮಾರು 1.30
Fire


ಬೆಂಗಳೂರು, 21 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ನಗರದ ನಾಗಸಂದ್ರ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮಧ್ಯಾಹ್ನ ಸಣ್ಣ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದ್ದು, ತಕ್ಷಣದ ಕ್ರಮದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

ಬಿಎಂಆರ್ಸಿಎಲ್ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಮಧ್ಯಾಹ್ನ ಸುಮಾರು 1.30ರ ವೇಳೆಗೆ ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ಪ್ರದೇಶದ ಸಮೀಪ ಅಳವಡಿಸಲಾಗಿದ್ದ ಸೂಚನಾ ಫಲಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ದೊರೆಯುತ್ತಿದ್ದಂತೆಯೇ ಕಾರ್ಯಾಚರಣೆ ಹಾಗೂ ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿವೆ.

ಘಟನೆಯಿಂದ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ಬಿಎಂಆರ್ಸಿಎಲ್ ಸ್ಪಷ್ಟಪಡಿಸಿದೆ. ಅಲ್ಲದೆ, ಬೆಂಕಿ ಅವಘಡದಿಂದ ಮೆಟ್ರೋ ರೈಲು ಸಂಚಾರದ ಮೇಲೂ ಯಾವುದೇ ಪರಿಣಾಮ ಉಂಟಾಗಿಲ್ಲ. ಹಸಿರು ಮಾರ್ಗದ ಮಾದಾವರ–ಸಿಲ್ಕ್ ಇನ್ಸ್ಟಿಟ್ಯೂಟ್ ಮಾರ್ಗ ಸೇರಿದಂತೆ ಎಲ್ಲಾ ಮೆಟ್ರೋ ಸೇವೆಗಳು ಎಂದಿನಂತೆ ಸುಗಮವಾಗಿ ಕಾರ್ಯನಿರ್ವಹಿಸುತ್ತಿವೆ.

ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande