
ಬಳ್ಳಾರಿ, 21 ಜೂನ್ (ಹಿ.ಸ.) :
ಆ್ಯಂಕರ್ : ವೈದ್ಯಕೀಯ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾನುವಾರ ನಗರದ ವಿವಿಧ ಕೇಂದ್ರಗಳಲ್ಲಿ ಅತ್ಯಂತ ಯಶಸ್ವಿಯಾಗಿ ಮತ್ತು ಶಾಂತಿಯುತವಾಗಿ ಜರುಗಿತು.
ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಕಟ್ಟುನಿಟ್ಟಿನ ನಿಗಾದಲ್ಲಿ ಬಳ್ಳಾರಿ ನಗರದ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.
ಜಿಲ್ಲೆಯಲ್ಲಿ ಈ ಬಾರಿ ನೀಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಒಟ್ಟು 4,127 ವಿದ್ಯಾರ್ಥಿಗಳಲ್ಲಿ 3,435 ವಿದ್ಯಾರ್ಥಿಗಳು ಹಾಜರಾಗಿದ್ದು, 692 ವಿದ್ಯಾರ್ಥಿಗಳು ಗೈರಾಗಿದ್ದರು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಪರೀಕ್ಷಾ ನಿಯಮಾವಳಿಗಳ ಪ್ರಕಾರ ವಿದ್ಯಾರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಿದ ನಂತರವೇ ಕೇಂದ್ರದ ಒಳಗೆ ಪ್ರವೇಶಿಸಲು ಅನುಮತಿ ನೀಡಲಾಯಿತು.
ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ದರು. ಒಟ್ಟಾರೆಯಾಗಿ ಬಳ್ಳಾರಿಯಲ್ಲಿ ಶೇ. 83.23 ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮೂಲಕ ನೀಟ್ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್