ಡಿ.ಹೆಚ್.ಓ & ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳ ಕಛೇರಿಗಳ ಸ್ಥಳಾಂತರ
ಕೊಪ್ಪಳ, 21 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ ಭವನದಲ್ಲಿದ್ದ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ (ಡಿ.ಹೆಚ್.ಓ) ಕಛೇರಿ ಮತ್ತು ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳ ಕಛೇರಿಗಳನ್ನು ಹಳೆ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಆರೋಗ್ಯ ಸಂಕೀರ್ಣಕ್ಕೆ ಸ್ಥ
ಡಿ.ಹೆಚ್.ಓ & ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳ ಕಛೇರಿಗಳ ಸ್ಥಳಾಂತರ


ಕೊಪ್ಪಳ, 21 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ ಭವನದಲ್ಲಿದ್ದ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ (ಡಿ.ಹೆಚ್.ಓ) ಕಛೇರಿ ಮತ್ತು ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳ ಕಛೇರಿಗಳನ್ನು ಹಳೆ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಆರೋಗ್ಯ ಸಂಕೀರ್ಣಕ್ಕೆ ಸ್ಥಳಾಂತರಿಸಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಕೊಪ್ಪಳ ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳ ಕಛೇರಿ, ಜಿಲ್ಲಾ ರೋಗವಾಹಕ ಆಶೀತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿ ಸೇರಿದಂತೆ ಈ ಎಲ್ಲಾ ಕಛೇರಿಗಳು ಹೊಸಪೇಟೆ ರಸ್ತೆಯ ಕೊಪ್ಪಳ ಜಿಲ್ಲಾ ಆಡಳಿತ ಭವನದಿಂದ ಜಿಲ್ಲಾ ಆರೋಗ್ಯ ಸಂಕೀರ್ಣ, ಎಸ್.ಬಿ.ಐ ರಸ್ತೆ, ಹಳೆ ಜಿಲ್ಲಾ ಆಸ್ಪತ್ರೆ ಆವರಣ, ನಗರಸಭೆ ಕಾರ್ಯಾಲಯ ಹತ್ತಿರ, ವಿದ್ಯಾನಗರ, ಕೊಪ್ಪಳ-583231 ಇಲ್ಲಿಗೆ ಸ್ಥಳಾಂತರಗೊಂಡಿರುತ್ತವೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಸಹಕರಿಸುವಂತೆ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಟಿ.ಲಿಂಗರಾಜು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande