ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ
ಬೆಂಗಳೂರು, 21 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿ ಆವರಣದಲ್ಲಿ ಅಧಿಕಾರ ಸ್ವೀಕಾರ ಸಮಾರಂಭವನ್ನು ಆಯೋಜಿಸಲಾಗಿ
Bkh


ಬೆಂಗಳೂರು, 21 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿ ಆವರಣದಲ್ಲಿ ಅಧಿಕಾರ ಸ್ವೀಕಾರ ಸಮಾರಂಭವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಭಾಗವಹಿಸಲಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸಚಿವ ಸಂಪುಟದ ಸದಸ್ಯರು, ಸಂಸದರು, ಶಾಸಕರು, ಎಐಸಿಸಿ ಕಾರ್ಯದರ್ಶಿಗಳು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರು ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande