ವಿಜಯಪುರದಲ್ಲಿ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಲ್ಲಿ ಜಾಗೃತಿ
ವಿಜಯಪುರ, 22 ಜೂನ್ (ಹಿ.ಸ.) : ಆಂಕರ್ : “ಅಂತಾರಾಷ್ಟ್ರೀಯ ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆ-2026” ಅಂಗವಾಗಿ ವಿಜಯಪುರ ನಗರದಲ್ಲಿ ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವಿಜಯಪು
ಪೋಲಿಸ್


ವಿಜಯಪುರ, 22 ಜೂನ್ (ಹಿ.ಸ.) :

ಆಂಕರ್ : “ಅಂತಾರಾಷ್ಟ್ರೀಯ ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆ-2026” ಅಂಗವಾಗಿ ವಿಜಯಪುರ ನಗರದಲ್ಲಿ ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ವಿಜಯಪುರ ನಗರದ ಬಿಎಲ್ಡಿಇ ಲೈಬ್ರರಿ ಅಡಿಟೋರಿಯಂ ಹಾಲ್ ನಲ್ಲಿ ಬಿಎಲ್ಡಿಇ ಆಸ್ಪತ್ರೆಯ ನಶಾ ಮುಕ್ತ ಸಮಿತಿ ಹಾಗೂ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಕುರಿತು ವಿವರವಾಗಿ ಮಾಹಿತಿ ನೀಡಲಾಯಿತು. ಯುವಜನತೆ ಮಾದಕ ವ್ಯಸನಗಳಿಂದ ದೂರ ಉಳಿದು ಆರೋಗ್ಯಕರ ಜೀವನ ನಡೆಸುವಂತೆ ಕರೆ ನೀಡಲಾಯಿತು.

ಮಾದಕ ವಸ್ತುಗಳ ಬಳಕೆಯು ವ್ಯಕ್ತಿಯ ಭವಿಷ್ಯ ಮಾತ್ರವಲ್ಲದೆ ಕುಟುಂಬ ಮತ್ತು ಸಮಾಜದ ಮೇಲೂ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಜಾಗೃತರಾಗಬೇಕು, ತಮ್ಮ ಸ್ನೇಹಿತರಲ್ಲಿಯೂ ಅರಿವು ಮೂಡಿಸಬೇಕು ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆ ವಿರೋಧಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸಮಾಜದಲ್ಲಿ ನಶಾ ಮುಕ್ತ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸುವಂತೆ ಕರೆ ನೀಡಲಾಯಿತು.

ಬಿಎಲ್ಡಿಇ ಆಸ್ಪತ್ರೆಯ ನಶಾ ಮುಕ್ತ ಸಮಿತಿ ಸದಸ್ಯರು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande