ಕೊಪ್ಪಳದಲ್ಲಿ ಬಿಜೆಪಿ ಸಂಘಟನಾತ್ಮಕ ಸಭೆ
ಕೊಪ್ಪಳ, 22 ಜೂನ್ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ಪಕ್ಷದ ಸಂಘಟನಾತ್ಮಕ ಸಭೆ ನಡೆಯಿತು. ಸಭೆಯನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕ ಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಸಲಾಯಿತು. ಸಭೆಯಲ್ಲಿ ಪಕ್ಷದ ಸಂಘಟನ
Bjp meeting


ಕೊಪ್ಪಳ, 22 ಜೂನ್ (ಹಿ.ಸ.) :

ಆ್ಯಂಕರ್ : ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ಪಕ್ಷದ ಸಂಘಟನಾತ್ಮಕ ಸಭೆ ನಡೆಯಿತು. ಸಭೆಯನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕ ಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಸಲಾಯಿತು.

ಸಭೆಯಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲಪಡಿಸುವುದು, ಮುಂಬರುವ ರಾಜಕೀಯ ಚಟುವಟಿಕೆಗಳು, ಸದಸ್ಯತ್ವ ವೃದ್ಧಿ ಹಾಗೂ ಕಾರ್ಯಕರ್ತರ ಸಕ್ರಿಯ ಭಾಗವಹಿಸುವಿಕೆ ಕುರಿತು ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣವರ, ಮಾಜಿ ಸಚಿವ ಹಾಲಪ್ಪ ಆಚಾರ, ಶಾಸಕ ದೊಡ್ಡನಗೌಡ ಪಾಟೀಲ್, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಸಂಸದ ಶಿವರಾಮಗೌಡ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಪಕ್ಷದ ಮುಖಂಡ ಡಾ. ಬಸವರಾಜ ಕ್ಯಾವಟರ್ ಹಾಗೂ ವಿಭಾಗ ಸಹ ಪ್ರಭಾರಿ ಚನ್ನಬಸನಗೌಡ ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಸಭೆಯಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಚೈತನ್ಯ ತುಂಬುವ ಜೊತೆಗೆ ಜನಸಂಪರ್ಕ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವ ಕುರಿತು ನಾಯಕರು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಜಿಲ್ಲಾ ಮಟ್ಟದಲ್ಲಿ ಪಕ್ಷದ ಚಟುವಟಿಕೆಗಳನ್ನು ವಿಸ್ತರಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಬಿಜೆಪಿಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಸಂಕಲ್ಪವನ್ನು ವ್ಯಕ್ತಪಡಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande