ಉದ್ಯಮ ತಜ್ಞರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ
ಬೆಂಗಳೂರು, 22 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದ ರಾಜಧಾನಿ ಬೆಂಗಳೂರಿನ ಮುಂದಿನ ಹಂತದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಕ್ಷೇತ್ರಗಳ ಪ್ರಮುಖ ಉದ್ಯಮಿಗಳು, ತಜ್ಞರು ಹಾಗೂ ನಾಯಕರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸಭೆ ನಡೆಸಿದರು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹ
Cm meeting


ಬೆಂಗಳೂರು, 22 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದ ರಾಜಧಾನಿ ಬೆಂಗಳೂರಿನ ಮುಂದಿನ ಹಂತದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಕ್ಷೇತ್ರಗಳ ಪ್ರಮುಖ ಉದ್ಯಮಿಗಳು, ತಜ್ಞರು ಹಾಗೂ ನಾಯಕರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸಭೆ ನಡೆಸಿದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಖ್ಯಾತ ಉದ್ಯಮಿ ಕಿರಣ್ ಮಜುಂದಾರ್-ಶಾ ಅವರ ನೇತೃತ್ವದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ತಜ್ಞರೊಂದಿಗೆ ಸಂವಾದ ನಡೆಸಿದ ಸಂತಸ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದವರು ಬೆಂಗಳೂರಿನ ಭವಿಷ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಮೂಲ್ಯವಾದ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

“ನಮ್ಮ ರಾಜಧಾನಿ ನಗರದ ಮುಂದಿನ ಬೆಳವಣಿಗೆಯ ಹಂತವನ್ನು ರೂಪಿಸುವ ಸಂದರ್ಭದಲ್ಲಿ ಉದ್ಯಮ ವಲಯದ ನಾಯಕರು, ನವೋದ್ಯಮಿಗಳು ಹಾಗೂ ನಾಗರಿಕರ ಸಲಹೆಗಳು ಅತ್ಯಂತ ಮಹತ್ವದ್ದಾಗಿವೆ. ಸುಸ್ಥಿರ, ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ಹಾಗೂ ವಾಸಯೋಗ್ಯ ಬೆಂಗಳೂರನ್ನು ನಿರ್ಮಿಸಲು ಇಂತಹ ಅಭಿಪ್ರಾಯಗಳು ಮಾರ್ಗದರ್ಶನ ನೀಡಲಿವೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ನಗರದ ಮೂಲಸೌಕರ್ಯ ಅಭಿವೃದ್ಧಿ, ಆಡಳಿತ ವ್ಯವಸ್ಥೆಯ ಸುಧಾರಣೆ ಹಾಗೂ ನಾಗರಿಕರ ಜೀವನಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಈ ಸಲಹೆಗಳು ಸಹಕಾರಿಯಾಗಲಿವೆ. ಬೆಂಗಳೂರನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸುವ ಹಾಗೂ ಚೈತನ್ಯಮಯ ನಗರವನ್ನಾಗಿ ರೂಪಿಸುವ ಕಾರ್ಯದಲ್ಲಿ ಎಲ್ಲಾ ಭಾಗೀದಾರರೊಂದಿಗೆ ಸರ್ಕಾರ ನಿಕಟವಾಗಿ ಕಾರ್ಯನಿರ್ವಹಿಸಲು ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ರಾಜ್ಯದ ಬೃಹತ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಎನ್.ಎ.ಹ್ಯಾರಿಸ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande