ವಿದ್ಯುತ್ ಖಾಸಗೀಕರಣ ನೀತಿ ವಿರೋಧಿಸಿ ಮುಧೋಳದಲ್ಲಿ ರೈತರ ಬೃಹತ್ ಹೋರಾಟ
ಬಾಗಲಕೋಟೆ, 22 ಜೂನ್ (ಹಿ.ಸ.) : ಆ್ಯಂಕರ್ : ವಿದ್ಯುತ್ ಕ್ಷೇತ್ರದ ಖಾಸಗೀಕರಣ ನೀತಿಯನ್ನು ವಿರೋಧಿಸಿ ರೈತ ಸಂಘಟನೆಗಳ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಬೃಹತ್ ಬೈಕ್ ರ್ಯಾಲಿ ಮೂಲಕ ಪ್ರತಿಭಟನೆ ನಡೆಸಿದರು. ಸರ್ಕಾರದ ವಿದ್ಯುತ್ ಖಾಸಗೀಕರಣ ಕ್ರಮದಿಂದ ರೈತರು, ಬಡವರು ಹಾಗೂ ಸಾಮಾನ್ಯ ಗ
ರ್ಯಾಲಿ


ಬಾಗಲಕೋಟೆ, 22 ಜೂನ್ (ಹಿ.ಸ.) :

ಆ್ಯಂಕರ್ : ವಿದ್ಯುತ್ ಕ್ಷೇತ್ರದ ಖಾಸಗೀಕರಣ ನೀತಿಯನ್ನು ವಿರೋಧಿಸಿ ರೈತ ಸಂಘಟನೆಗಳ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಬೃಹತ್ ಬೈಕ್ ರ್ಯಾಲಿ ಮೂಲಕ ಪ್ರತಿಭಟನೆ ನಡೆಸಿದರು. ಸರ್ಕಾರದ ವಿದ್ಯುತ್ ಖಾಸಗೀಕರಣ ಕ್ರಮದಿಂದ ರೈತರು, ಬಡವರು ಹಾಗೂ ಸಾಮಾನ್ಯ ಗ್ರಾಹಕರಿಗೆ ತೊಂದರೆಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ನೀತಿಯನ್ನು ತಕ್ಷಣ ಕೈಬಿಡುವಂತೆ ಆಗ್ರಹಿಸಿದರು.

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಗೆ ನೂರಾರು ರೈತರು ಹಾಗೂ ಸಂಘಟನೆಗಳ ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಚಾಲನೆ ನೀಡಿದರು. ವಿವಿಧ ಘೋಷಣೆಗಳನ್ನು ಕೂಗುತ್ತಾ ಹೆಸ್ಕಾಂ ಕಚೇರಿವರೆಗೆ ಆಗಮಿಸಿದ ಪ್ರತಿಭಟನಾಕಾರರು, ವಿದ್ಯುತ್ ಕ್ಷೇತ್ರವನ್ನು ಖಾಸಗಿ ಕಂಪನಿಗಳ ಕೈಗೆ ನೀಡುವ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ಹೆಸ್ಕಾಂ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ರೈತ ಮುಖಂಡರು, ವಿದ್ಯುತ್ ಎಂಬುದು ಜನರ ಮೂಲಭೂತ ಅಗತ್ಯವಾಗಿದ್ದು, ಇದನ್ನು ಖಾಸಗೀಕರಣ ಮಾಡುವುದರಿಂದ ವಿದ್ಯುತ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ವಿಶೇಷವಾಗಿ ಕೃಷಿ ಕ್ಷೇತ್ರದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಆತಂಕವಿದೆ ಎಂದು ಹೇಳಿದರು.

ರೈತರಿಗೆ ಸಮರ್ಪಕ ಹಾಗೂ ಕಡಿಮೆ ದರದಲ್ಲಿ ವಿದ್ಯುತ್ ಪೂರೈಕೆ ಮುಂದುವರಿಸಬೇಕು. ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗೀಕರಣ ಮಾಡುವ ಬದಲು ಸರ್ಕಾರವೇ ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ಮನವಿ ಪತ್ರವನ್ನು ಹೆಸ್ಕಾಂ ಅಧಿಕಾರಿಗಳಿಗೆ ಸಲ್ಲಿಸಿ, ಸರ್ಕಾರವು ರೈತರ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿವಿಧ ರೈತ ಸಂಘಟನೆಗಳ ಪದಾಧಿಕಾರಿಗಳು, ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande