ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಎಲ್ಲರೂ ಪಾಲ್ಗೊಳ್ಳಿ : ವಿವಿ ಕುಲಸಚಿವ
ಬಳ್ಳಾರಿ, 22 ಜೂನ್ (ಹಿ.ಸ.) : ಆ್ಯಂಕರ್ : ಮತದಾನ ಎಂಬುದು ಪ್ರತಿ ನಾಗರಿಕರ ಮಹತ್ವದ ಹಕ್ಕು ಇದನ್ನು ಸಕ್ರೀಯವಾಗಿ ಚಲಾಯಿಸಲು ಕಾಲಕಾಲಕ್ಕೆ ಪರಿಷ್ಕರಣೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ವಿವಿಯ ಕುಲಸಚಿವ ಪ್ರೊ.ವಿ ಲೋಕೇಶ್ ಕರೆ ನೀಡಿದರು. ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಮತದಾರರ ವಿಶೇಷ ಸಮಗ್
Everyone should participate in the revision of the voter list.


Everyone should participate in the revision of the voter list.


ಬಳ್ಳಾರಿ, 22 ಜೂನ್ (ಹಿ.ಸ.) :

ಆ್ಯಂಕರ್ : ಮತದಾನ ಎಂಬುದು ಪ್ರತಿ ನಾಗರಿಕರ ಮಹತ್ವದ ಹಕ್ಕು ಇದನ್ನು ಸಕ್ರೀಯವಾಗಿ ಚಲಾಯಿಸಲು ಕಾಲಕಾಲಕ್ಕೆ ಪರಿಷ್ಕರಣೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ವಿವಿಯ ಕುಲಸಚಿವ ಪ್ರೊ.ವಿ ಲೋಕೇಶ್ ಕರೆ ನೀಡಿದರು.

ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮತದಾನದ ಹಕ್ಕು ಕೇವಲ ಸಂವಿಧಾನಾತ್ಮಕ ಹಕ್ಕಾಗಿರದೆ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಆಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಅನ್ವಯಿಕ ವಿಜ್ಞಾನ ನಿಕಾಯದ ಡೀನ್ ಪ್ರೊ.ಹನುಮೇಶ್ ವೈದ್ಯ, ಚುನಾವಣಾ ಸಾಕ್ಷರತಾ ಕ್ಲಬ್ ಚಟುವಟಿಕೆಗಳ ಸಂಯೋಜಕ ಡಾ.ವೀರಪ್ರಸಾದ್.ಎಂ., ವಿವಿಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ವೀರಶೈವ ಕಾಲೇಜಿನಲ್ಲಿ ಕಾರ್ಯಕ್ರಮ :

ವಿಶ್ವವಿದ್ಯಾಲಯದ ಅಧೀನದ ವೀರಶೈವ ಕಾಲೇಜಿನಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮಕ್ಕೆ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ವಿ ಲೋಕೇಶ್ ಚಾಲನೆ ನೀಡಿದರು.

ಪ್ರಜಾಪ್ರಭುತ್ವದ ಯಶಸ್ವಿ ಕಾರ್ಯನಿರ್ವಹಣೆಯಲ್ಲಿ ಮತದಾರರ ಜಾಗೃತಿ ಹಾಗೂ ಯುವಜನರ ಸಕ್ರಿಯ ಪಾಲ್ಗೊಳ್ಳುವಿಕೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷೀಯ ಭಾಷಣವನ್ನು ವೀರಶೈವ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಸಾಹುಕಾರ್ ಸತೀಶಬಾಬು ಅವರು ನೆರವೇರಿಸಿದರು. ಯುವಜನರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಳವಡಿಸಿಕೊಂಡು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ತಮ್ಮ ಪಾತ್ರವನ್ನು ಸಮರ್ಥವಾಗಿ ನಿರ್ವಹಿಸಬೇಕೆಂದು ಅವರು ಕರೆ ನೀಡಿದರು.

ವಿವಿಯ ರಾಜ್ಯಶಾಸ್ತ್ರ ವಿಭಾಗದ ಡಾ.ವೀರಪ್ರಸಾದ್ ಎಂ. ಹಾಗೂ ವೀರಶೈವ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಜಿ. ಮಲ್ಲನಗೌಡ ಕಾರ್ಯಕ್ರಮದಲ್ಲಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande