ವಿದ್ಯುತ್ ಖಾಸಗೀಕರಣ ನೀತಿ ವಿರೋಧಿಸಿ ಕೆರೂರಿನಲ್ಲಿ ರೈತ ಸಂಘದ ಪ್ರತಿಭಟನೆ
ಬಾಗಲಕೋಟೆ, 22 ಜೂನ್ (ಹಿ.ಸ.) : ಆ್ಯಂಕರ್ : ವಿದ್ಯುತ್ ಖಾಸಗೀಕರಣ ನೀತಿಯನ್ನು ವಿರೋಧಿಸಿ ರೈತ ಸಂಘದ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರಿನಲ್ಲಿ ಸೋಮವಾರ ಹೆಸ್ಕಾಂ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಸರ್ಕಾರ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣದತ್ತ ಕೊಂಡೊಯ್ಯುವ ಕ
Protest


ಬಾಗಲಕೋಟೆ, 22 ಜೂನ್ (ಹಿ.ಸ.) :

ಆ್ಯಂಕರ್ : ವಿದ್ಯುತ್ ಖಾಸಗೀಕರಣ ನೀತಿಯನ್ನು ವಿರೋಧಿಸಿ ರೈತ ಸಂಘದ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರಿನಲ್ಲಿ ಸೋಮವಾರ ಹೆಸ್ಕಾಂ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಸರ್ಕಾರ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣದತ್ತ ಕೊಂಡೊಯ್ಯುವ ಕ್ರಮದಿಂದ ರೈತರು, ಬಡವರು ಹಾಗೂ ಸಾಮಾನ್ಯ ಗ್ರಾಹಕರಿಗೆ ತೊಂದರೆಯಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತ ಮುಖಂಡರು ಮಾತನಾಡಿ, ವಿದ್ಯುತ್ ಪೂರೈಕೆ ವ್ಯವಸ್ಥೆ ಸಾರ್ವಜನಿಕ ವಲಯದಲ್ಲಿಯೇ ಮುಂದುವರಿಯಬೇಕು. ಖಾಸಗಿ ಕಂಪನಿಗಳಿಗೆ ವಿದ್ಯುತ್ ವಿತರಣೆಯ ಜವಾಬ್ದಾರಿ ನೀಡಿದರೆ ಕೃಷಿ ಪಂಪ್ಸೆಟ್ಗಳಿಗೆ, ಸಣ್ಣ ಕೈಗಾರಿಕೆಗಳಿಗೆ ಹಾಗೂ ಸಾಮಾನ್ಯ ಜನರಿಗೆ ಹೆಚ್ಚಿನ ಹೊರೆ ಬೀಳುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ರೈತರ ಸಮಸ್ಯೆಗಳನ್ನು ಪರಿಗಣಿಸದೆ ಕೈಗೊಳ್ಳುತ್ತಿರುವ ವಿದ್ಯುತ್ ಖಾಸಗೀಕರಣದ ನಿರ್ಧಾರವನ್ನು ಕೂಡಲೇ ಕೈಬಿಡಬೇಕು. ಕೃಷಿ ಕ್ಷೇತ್ರಕ್ಕೆ ಸಮರ್ಪಕ ವಿದ್ಯುತ್ ಪೂರೈಕೆ, ಸಮರ್ಪಕ ದರದಲ್ಲಿ ಸೇವೆ ಹಾಗೂ ರೈತರ ಹಿತ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಂತರ ಪ್ರತಿಭಟನಾಕಾರರು ಹೆಸ್ಕಾಂ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ವಿದ್ಯುತ್ ಖಾಸಗೀಕರಣ ನೀತಿ ಹಿಂಪಡೆಯುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಪದಾಧಿಕಾರಿಗಳು, ರೈತರು ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande