
ಬೆಂಗಳೂರು, 22 ಜೂನ್ (ಹಿ.ಸ.) :
ಆ್ಯಂಕರ್ : ಗಾಂಧೀನಗರ ವಿಧಾನ ಸಭಾ ಕ್ಷೇತ್ರದ ವಿವಿಧ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಜೈನ್ ಯುವ ಸಂಘಟನೆಯ ಸಹಭಾಗಿತ್ವದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಗಾಂಧೀನಗರ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ನೋಟ್ಬುಕ್ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಿಕ್ಷಣವು ಮಕ್ಕಳ ಭವಿಷ್ಯ ರೂಪಿಸುವ ಪ್ರಮುಖ ಸಾಧನವಾಗಿದ್ದು, ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಸರ್ಕಾರಿ ಶಾಲೆಗಳ ಮಕ್ಕಳಿಗೆ ನೆರವಾಗುವ ಇಂತಹ ಕಾರ್ಯಕ್ರಮಗಳು ಶಿಕ್ಷಣದ ಬಗ್ಗೆ ಆಸಕ್ತಿ ಹೆಚ್ಚಿಸುವುದರ ಜೊತೆಗೆ ಅವರ ಕಲಿಕೆಗೆ ಉತ್ತೇಜನ ನೀಡುತ್ತವೆ ಎಂದು ಅಭಿಪ್ರಾಯಪಟ್ಟರು.
ಜೈನ್ ಯುವ ಸಂಘಟನೆಯ ಸಹಕಾರದಿಂದ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೆರವಾಗುವ ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಮುಂದುವರಿಸುವ ಸಂಕಲ್ಪವನ್ನು ಸಂಘಟಕರು ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.