ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹2.09 ಕೋಟಿ ಮೌಲ್ಯದ ಹೈಡ್ರೋಪೊನಿಕ್ ಗಾಂಜಾ ವಶ ; ಪ್ರಯಾಣಿಕನ ಬಂಧನ
ಬಂಧ ನ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹2.09 ಕೋಟಿ ಮೌಲ್ಯದ ಹೈಡ್ರೋಪೊನಿಕ್ ಗಾಂಜಾ ವಶ ; ಪ್ರಯಾಣಿಕನ ಬಂಧನ


ಬೆಂಗಳೂರು, 22 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಮಾದಕವಸ್ತು ಕಳ್ಳಸಾಗಣೆ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು ₹2.09 ಕೋಟಿ ಮೌಲ್ಯದ 5.98 ಕೆ.ಜಿ. ಹೈಡ್ರೋಪೊನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಜೂನ್ 19ರಂದು ಥಾಯ್ಲೆಂಡ್ನ ಬ್ಯಾಂಕಾಕ್ನಿಂದ ಬೆಂಗಳೂರಿಗೆ ಆಗಮಿಸಿದ್ದ ಒಬ್ಬ ಪ್ರಯಾಣಿಕನನ್ನು ಅನುಮಾನಾಸ್ಪದ ವರ್ತನೆಯ ಆಧಾರದ ಮೇಲೆ ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಆತನ ಚೆಕ್-ಇನ್ ಲಗೇಜ್ ಅನ್ನು ಪರಿಶೀಲಿಸಿದಾಗ ಸೂಕ್ಷ್ಮವಾಗಿ ಅಡಗಿಸಿಟ್ಟಿದ್ದ 5.98 ಕೆ.ಜಿ. ಹೈಡ್ರೋಪೊನಿಕ್ ಗಾಂಜಾ ಪತ್ತೆಯಾಯಿತು.

ವಶಪಡಿಸಿಕೊಳ್ಳಲಾದ ಮಾದಕವಸ್ತುವಿನ ಅಂದಾಜು ಮಾರುಕಟ್ಟೆ ಮೌಲ್ಯ ₹2.09 ಕೋಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತ ಔಷಧಗಳ ಕಾಯ್ದೆ (ಎನ್ಡಿಪಿಎಸ್), 1985ರ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಕಸ್ಟಮ್ಸ್ ಅಧಿಕಾರಿಗಳು ಮುಂದುವರಿಸಿದ್ದು, ಮಾದಕವಸ್ತುಗಳ ಮೂಲ, ಕಳ್ಳಸಾಗಣೆ ಜಾಲ ಮತ್ತು ಇತರ ಸಂಪರ್ಕಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande