ಬ್ರಿಕ್ಸ್ ಭದ್ರತಾ ಸಲಹೆಗಾರರ ಸಭೆಗೆ ಆಗಮಿಸಿದ ಇರಾನ್ ಭದ್ರತಾ ಮಂಡಳಿ ಉಪ ಕಾರ್ಯದರ್ಶಿ
ನವದೆಹಲಿ, 22 ಜೂನ್ (ಹಿ.ಸ.) : ಆ್ಯಂಕರ್ : ಬ್ರಿಕ್ಸ್ ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು ಹಾಗೂ ಭದ್ರತಾ ಸಂಸ್ಥೆಗಳ ಮುಖ್ಯಸ್ಥರ 16ನೇ ಸಭೆಯಲ್ಲಿ ಭಾಗವಹಿಸಲು ಇರಾನ್ ನ ಘಾದಿರ್ ನೆಜಾಮಿ ಅವರು ನವದೆಹಲಿಗೆ ಆಗಮಿಸಿದ್ದಾರೆ. ಭಾರತದಲ್ಲಿನ ಇರಾನ್ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಈ
ಇರಾನ್ ನಿಯೋಗ


ನವದೆಹಲಿ, 22 ಜೂನ್ (ಹಿ.ಸ.) :

ಆ್ಯಂಕರ್ : ಬ್ರಿಕ್ಸ್ ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು ಹಾಗೂ ಭದ್ರತಾ ಸಂಸ್ಥೆಗಳ ಮುಖ್ಯಸ್ಥರ 16ನೇ ಸಭೆಯಲ್ಲಿ ಭಾಗವಹಿಸಲು ಇರಾನ್ ನ ಘಾದಿರ್ ನೆಜಾಮಿ ಅವರು ನವದೆಹಲಿಗೆ ಆಗಮಿಸಿದ್ದಾರೆ.

ಭಾರತದಲ್ಲಿನ ಇರಾನ್ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಈ ಮಾಹಿತಿಯನ್ನು ತಿಳಿಸಿದೆ. ತಮ್ಮ ಭಾರತ ಭೇಟಿಯ ಸಂದರ್ಭದಲ್ಲಿ ಘಾದಿರ್ ನೆಜಾಮಿ ವಿವಿಧ ವಿಶೇಷ ಅಧಿವೇಶನಗಳಲ್ಲಿ ಭಾಗವಹಿಸಲಿದ್ದು, ಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ರಾಷ್ಟ್ರಗಳ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.

ಭದ್ರತೆ, ಬಹುಪಕ್ಷೀಯ ಸಹಕಾರ, ಭಯೋತ್ಪಾದನೆ ನಿಗ್ರಹ, ಸೈಬರ್ ಭದ್ರತೆ ಹಾಗೂ ಇಂಧನ ಭದ್ರತೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಅವರು ಚರ್ಚೆ ನಡೆಸಲಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಅಲ್ಲದೆ, ಸದಸ್ಯ ರಾಷ್ಟ್ರಗಳ ನಡುವಿನ ಭದ್ರತಾ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವಿವಿಧ ದ್ವಿಪಕ್ಷೀಯ ಸಭೆಗಳೂ ನಡೆಯಲಿವೆ.

ಗಮನಾರ್ಹವಾಗಿ, ನವದೆಹಲಿಯಲ್ಲಿ ಜೂನ್ 22 ಮತ್ತು 23ರಂದು ಬ್ರಿಕ್ಸ್ ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು ಹಾಗೂ ಭದ್ರತಾ ಸಂಸ್ಥೆಗಳ ಮುಖ್ಯಸ್ಥರ 16ನೇ ಸಭೆ ನಡೆಯುತ್ತಿದೆ. ಈ ಮಹತ್ವದ ಎರಡು ದಿನಗಳ ಸಭೆಗೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅಧ್ಯಕ್ಷತೆ ವಹಿಸಿದ್ದಾರೆ.

ಸಭೆಯಲ್ಲಿ ಸೈಬರ್ ಭದ್ರತೆ, ಕೃತಕ ಬುದ್ಧಿಮತ್ತೆ (ಎಐ), ಭಯೋತ್ಪಾದನೆ, ಗಡಿ ದಾಟುವ ಅಪರಾಧ ಚಟುವಟಿಕೆಗಳು ಹಾಗೂ ಇತರ ಸಾಂಪ್ರದಾಯಿಕವಲ್ಲದ ಭದ್ರತಾ ಸವಾಲುಗಳ ಕುರಿತು ವಿಸ್ತೃತ ಚರ್ಚೆ ನಡೆಯುವ ಸಾಧ್ಯತೆಯಿದೆ.

ಈ ಸಭೆಯು ಸೆಪ್ಟೆಂಬರ್ 2026ರಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆ 2026ಗೆ ಪೂರ್ವಭಾವಿಯಾಗಿ ಮಹತ್ವ ಪಡೆದಿದ್ದು, ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ಸೇರಿದಂತೆ ವಿಸ್ತೃತ ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಇದರಲ್ಲಿ ಭಾಗವಹಿಸಲಿವೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande