ಜೂ. 26ರಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ
ಕೊಪ್ಪಳ, 22 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯನ್ನು ಜೂನ್ 26ರಂದು ಅಪರಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇ
ಜೂ. 26ರಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ


ಕೊಪ್ಪಳ, 22 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯನ್ನು ಜೂನ್ 26ರಂದು ಅಪರಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ರಾಜ್ಯಾಧ್ಯಕ್ಷರು, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯೊಂದಿಗೆ ಚರ್ಚಿಸಲಿದ್ದು, ಜಿಲ್ಲಾ ಉಪಾಧ್ಯಕ್ಷರು, ಸದಸ್ಯರು, ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು ಮತ್ತು ಇತರೆ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಬೇಕು. ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಅನುಷ್ಠಾನಾ ಇಲಾಖೆಗಳ ಅಧಿಕಾರಿಗಳು ಸೂಕ್ತ ಮಾಹಿತಿಯೊಂದಿಗೆ ಕಡ್ಡಾಯವಾಗಿ ಈ ಸಭೆಗೆ ಹಾಜರಾಗಬೇಕು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande