ವಿದೇಶಾಂಗ ಸಚಿವ ಜೈಶಂಕರ್ ಮಂಗೋಲಿಯಾ ಹಾಗೂ ದಕ್ಷಿಣ ಕೊರಿಯಾ ಪ್ರವಾಸ
ನವದೆಹಲಿ, 22 ಜೂನ್ (ಹಿ.ಸ.) : ಆ್ಯಂಕರ್ : ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇಂದಿನಿಂದ ಜೂನ್ 25ರವರೆಗೆ ಮಂಗೋಲಿಯಾ ಹಾಗೂ ದಕ್ಷಿಣ ಕೊರಿಯಾಕ್ಕೆ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಪ್ರವಾಸದ ಮೊದಲ ಹಂತದಲ್ಲಿ ಜೈಶಂಕರ್ ಅವರು ಜೂನ್ 22 ಮತ್ತು 23ರಂದು ಮಂಗೋ
ಜೈಶಂಕರ್


ನವದೆಹಲಿ, 22 ಜೂನ್ (ಹಿ.ಸ.) :

ಆ್ಯಂಕರ್ : ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇಂದಿನಿಂದ ಜೂನ್ 25ರವರೆಗೆ ಮಂಗೋಲಿಯಾ ಹಾಗೂ ದಕ್ಷಿಣ ಕೊರಿಯಾಕ್ಕೆ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಪ್ರವಾಸದ ಮೊದಲ ಹಂತದಲ್ಲಿ ಜೈಶಂಕರ್ ಅವರು ಜೂನ್ 22 ಮತ್ತು 23ರಂದು ಮಂಗೋಲಿಯಾಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಮಂಗೋಲಿಯಾದ ಉನ್ನತ ನಾಯಕತ್ವದೊಂದಿಗೆ ಮಾತುಕತೆ ನಡೆಸಲಿದ್ದು, ಮಂಗೋಲಿಯಾದ ವಿದೇಶಾಂಗ ಸಚಿವೆ ಬಿ. ಬಟ್ಸೆಟ್ಸೆಗ್ ಅವರೊಂದಿಗೆ ದ್ವಿಪಕ್ಷೀಯ ಸಂಬಂಧಗಳು ಹಾಗೂ ಪರಸ್ಪರ ಸಹಕಾರದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಬಳಿಕ ಜೂನ್ 24 ಮತ್ತು 25ರಂದು ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ದಕ್ಷಿಣ ಕೊರಿಯಾದ ವಿದೇಶಾಂಗ ಸಚಿವ ಚೋ ಹ್ಯುನ್ ಅವರೊಂದಿಗೆ ಮಾತುಕತೆ ನಡೆಸಲಿದ್ದು, ಉಭಯ ದೇಶಗಳ ನಡುವಿನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಲಿದ್ದಾರೆ.

ಇದೇ ವೇಳೆ ಜೂನ್ 25ರಂದು ದಕ್ಷಿಣ ಕೊರಿಯಾದ ಜೇಜು ನಗರದಲ್ಲಿ ನಡೆಯಲಿರುವ ‘ಶಾಂತಿ ಮತ್ತು ಸಮೃದ್ಧಿಗಾಗಿ ಜೇಜು ವೇದಿಕೆ’ ಕಾರ್ಯಕ್ರಮದಲ್ಲಿ ಜೈಶಂಕರ್ ಮುಖ್ಯ ಭಾಷಣ ಮಾಡಲಿದ್ದಾರೆ.

ಮಂಗೋಲಿಯಾ ಹಾಗೂ ದಕ್ಷಿಣ ಕೊರಿಯಾದೊಂದಿಗೆ ಭಾರತದ ರಾಜತಾಂತ್ರಿಕ, ಆರ್ಥಿಕ, ವ್ಯಾಪಾರ ಮತ್ತು ಕಾರ್ಯತಂತ್ರದ ಸಹಕಾರವನ್ನು ಇನ್ನಷ್ಟು ವಿಸ್ತರಿಸುವ ಉದ್ದೇಶದಿಂದ ಈ ಪ್ರವಾಸ ಮಹತ್ವ ಪಡೆದುಕೊಂಡಿದೆ. ಉಭಯ ರಾಷ್ಟ್ರಗಳೊಂದಿಗೆ ಭಾರತದ ಬಾಂಧವ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿ ಪ್ರಮುಖ ಹೆಜ್ಜೆಯಾಗಿ ಪರಿಗಣಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande