ನೀಟ್ ಪರೀಕ್ಷೆ ವಿವಾದ ; ಬಿಜೆಪಿ ದೇಶದ ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳಲಿ : ಬಿ.ಕೆ. ಹರಿಪ್ರಸಾದ್
ಬೆಂಗಳೂರು, 22 ಜೂನ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಸಂಕಲ್ಪ ಸಮಾವೇಶದಿಂದಾಗಿ ನೀಟ್ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಲು ಸಾಧ್ಯವಾಗಲಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಈ ಕುರಿತು ವಿಷಾದ ವ್ಯಕ್ತಪಡಿಸಿದರೂ ಬಿಜೆಪಿ ಸುಳ್ಳು ಮಾಹಿತಿ ಹರಡುತ್ತಿದ
Bkh


ಬೆಂಗಳೂರು, 22 ಜೂನ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಸಂಕಲ್ಪ ಸಮಾವೇಶದಿಂದಾಗಿ ನೀಟ್ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಲು ಸಾಧ್ಯವಾಗಲಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಈ ಕುರಿತು ವಿಷಾದ ವ್ಯಕ್ತಪಡಿಸಿದರೂ ಬಿಜೆಪಿ ಸುಳ್ಳು ಮಾಹಿತಿ ಹರಡುತ್ತಿದೆ ಎಂದು ಆರೋಪಿಸಿದರು.

ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸಂಕಲ್ಪ ಸಮಾವೇಶದ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿರುವುದು ನಿಜ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಭಾನುವಾರವೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೂ ಕೆಲ ವಿದ್ಯಾರ್ಥಿಗಳಿಗೆ ತೊಂದರೆ ಆಗಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಸ್ಗಳು ಬೆಳಗ್ಗೆ 10.30ರೊಳಗೆ ಅರಮನೆ ಮೈದಾನ ತಲುಪಿದ್ದವು. ವಾಹನಗಳ ನಿಲುಗಡೆಗೂ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು. ಆದಾಗ್ಯೂ ಕೆಲ ವಿದ್ಯಾರ್ಥಿಗಳಿಗೆ ತೊಂದರೆ ಆಗಿರುವ ವರದಿಗಳು ಬಂದಿದ್ದು, ಅವರಿಗೆ ಅಗತ್ಯ ಸಹಾಯ ಮಾಡಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ತಿಳಿಸಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಹರಿಪ್ರಸಾದ್, ನೀಟ್, ಸಿಬಿಎಸ್ಇ ಹಾಗೂ ಇತರೆ ರಾಷ್ಟ್ರೀಯ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ. ವಿದ್ಯಾರ್ಥಿಗಳ ಆತ್ಮಹತ್ಯೆಗಳಂತಹ ಗಂಭೀರ ಘಟನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಥವಾ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿಷಾದ ವ್ಯಕ್ತಪಡಿಸಿಲ್ಲ ಎಂದು ಆರೋಪಿಸಿದರು.

ದೇಶಾದ್ಯಂತ ಹಲವು ಜಿಲ್ಲೆಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಗೈರಾಗಿದ್ದಾರೆ. ಮೈಸೂರಿನಲ್ಲಿ 1,400ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಯಾದಗಿರಿಯಲ್ಲಿ 286 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಅಲ್ಲಿ ಕಾಂಗ್ರೆಸ್ ಕಾರ್ಯಕ್ರಮ ನಡೆದಿರಲಿಲ್ಲ. ಹೀಗಿರುವಾಗ ಎಲ್ಲದಕ್ಕೂ ಕಾಂಗ್ರೆಸ್ನ್ನು ಹೊಣೆ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸ ಕುಸಿತ ಹಾಗೂ ವಿದ್ಯಾರ್ಥಿಗಳ ಮಾನಸಿಕ ಒತ್ತಡಕ್ಕೆ ಕೇಂದ್ರ ಸರ್ಕಾರವೇ ಉತ್ತರ ನೀಡಬೇಕು. ದೇಶದ ಜನರ ಬಳಿ ಬಿಜೆಪಿ ಕ್ಷಮೆ ಕೇಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು

ಪ್ರಧಾನಿ ಮೋದಿ ವಿಮಾನ ನಿಲ್ದಾಣದಲ್ಲಿ ಕಾದಿರುವುದನ್ನು ನೋಡಿ ಕಾಂಗ್ರೆಸ್ ನಾಯಕರು ಕಲಿಯಬೇಕು ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಹರಿಪ್ರಸಾದ್, “ಮೋದಿ ಅವರು ಎಷ್ಟು ನಿಮಿಷ ಕಾದರು ಅಥವಾ ಯಾವ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸಿದರು ಎಂಬುದನ್ನು ನಾವು ಕಲಿಯಬೇಕಿಲ್ಲ. ಅವರು ಉತ್ತರಿಸಬೇಕಿರುವುದು ನೀಟ್, ಸಿಬಿಎಸ್ಇ ಮತ್ತು ಯುಪಿಎಸ್ಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಬಗ್ಗೆ” ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ನೆರವು ನೀಡಲು ಸಿದ್ಧ

ಕಾಂಗ್ರೆಸ್ ಕಾರ್ಯಕ್ರಮದಿಂದ ತೊಂದರೆ ಅನುಭವಿಸಿರುವ ವಿದ್ಯಾರ್ಥಿಗಳನ್ನು ಪಕ್ಷದ ತಂಡ ಭೇಟಿ ಮಾಡಲು ಪ್ರಯತ್ನಿಸಲಿದೆ. ಅವರಿಗೆ ಉಂಟಾಗಿರುವ ನಷ್ಟವನ್ನು ಭರಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಹರಿಪ್ರಸಾದ್ ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande