ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ
ಬೆಂಗಳೂರು, 22 ಜೂನ್ (ಹಿ.ಸ.) : ಆ್ಯಂಕರ್ : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮೈಲ್) ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ
Meeting


ಬೆಂಗಳೂರು, 22 ಜೂನ್ (ಹಿ.ಸ.) :

ಆ್ಯಂಕರ್ : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮೈಲ್) ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಇಂದು ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ನಗರಾಭಿವೃದ್ಧಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಅನುಷ್ಠಾನ, ಕಾಮಗಾರಿಗಳ ಪ್ರಗತಿ, ನಿಗದಿತ ಅವಧಿಯೊಳಗೆ ಯೋಜನೆಗಳನ್ನು ಪೂರ್ಣಗೊಳಿಸುವ ಕ್ರಮಗಳು ಹಾಗೂ ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ವಿಸ್ತೃತ ಚರ್ಚೆ ನಡೆಯಿತು. ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಮತ್ತು ನಿಗದಿತ ಸಮಯದೊಳಗೆ ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ರಸ್ತೆ, ಸೇತುವೆ, ಮಳೆನೀರು ಕಾಲುವೆ, ಸಾರ್ವಜನಿಕ ಸೌಲಭ್ಯಗಳು ಸೇರಿದಂತೆ ವಿವಿಧ ಮೂಲಸೌಕರ್ಯ ಯೋಜನೆಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಸಚಿವರು ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಬಿ-ಸ್ಮೈಲ್ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ತಾಂತ್ರಿಕ ನಿರ್ದೇಶಕ ಪ್ರಹ್ಲಾದ್, ಮುಖ್ಯ ಅಭಿಯಂತರರಾದ ಮಾದೇಶ್, ವಿಶ್ವನಾಥ್, ಮಾಲತಿ, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande