ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ; ಬಾಗಲಕೋಟೆಯಲ್ಲಿ ಬೆಂಬಲಿಗರ ಬೃಹತ್ ಪ್ರತಿಭಟನೆ
ಬಾಗಲಕೋಟೆ, 22 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಅವರ ಬೆಂಬಲಿಗರು ಸೋಮವಾರ ಬಾಗಲಕೋಟೆ ನಗರದಲ್ಲಿ ಪ್ರತಿಭಟನೆ ನಡೆಸಿದರು. ಶಾಸಕ ಕಾಶಪ್ಪನವರ ಅವರು ಪಕ್ಷ ಸಂಘಟನೆ
Proter


ಬಾಗಲಕೋಟೆ, 22 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಅವರ ಬೆಂಬಲಿಗರು ಸೋಮವಾರ ಬಾಗಲಕೋಟೆ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಶಾಸಕ ಕಾಶಪ್ಪನವರ ಅವರು ಪಕ್ಷ ಸಂಘಟನೆ, ಕ್ಷೇತ್ರದ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಅವರ ಅನುಭವ ಮತ್ತು ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬಾಗಲಕೋಟೆಯಲ್ಲಿ ಜಮಾಯಿಸಿದ ಕಾಶಪ್ಪನವರ ಬೆಂಬಲಿಗರು ಘೋಷಣೆಗಳನ್ನು ಕೂಗಿ, ಪಕ್ಷದ ವರಿಷ್ಠರು ಹುನಗುಂದ ಕ್ಷೇತ್ರದ ಶಾಸಕರಿಗೆ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ಎಂದು ಮುಖಂಡರು ಅಭಿಪ್ರಾಯಪಟ್ಟರು.

ಪ್ರತಿಭಟನೆಯಲ್ಲಿ ಮಾತನಾಡಿದ ಬೆಂಬಲಿಗರು, ಕಾಶಪ್ಪನವರ ಅವರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕನಾಗಿದ್ದು, ಗ್ರಾಮೀಣ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಅವರ ರಾಜಕೀಯ ಅನುಭವವನ್ನು ಬಳಸಿಕೊಳ್ಳಲು ಸರ್ಕಾರದಲ್ಲಿ ಜವಾಬ್ದಾರಿ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಲವು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಕಾಶಪ್ಪನವರ ಅಭಿಮಾನಿಗಳು ಭಾಗವಹಿಸಿ, ಸಚಿವ ಸ್ಥಾನ ನೀಡುವಂತೆ ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande