ಬೈಕ್ ಗೆ ಬೆಂಕಿ ಹೊತ್ತಿಕೊಂಡು ನಡು ರಸ್ತೆಯಲ್ಲೇ ಸವಾರ ಸಜೀವ ದಹನ
ಬಾಗಲಕೋಟೆ, 22 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ನಡು ರಸ್ತೆಯಲ್ಲೇ ಸಜೀವ ದಹನಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಮುಧೋಳ ನಗರದ ಜನತಾ ಪ್ಲಾಟ್ ನಿವಾಸಿ ನವೀನ ತಂದೆ ಹನಮಂ
Accident


ಬಾಗಲಕೋಟೆ, 22 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ನಡು ರಸ್ತೆಯಲ್ಲೇ ಸಜೀವ ದಹನಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಯುವಕನನ್ನು ಮುಧೋಳ ನಗರದ ಜನತಾ ಪ್ಲಾಟ್ ನಿವಾಸಿ ನವೀನ ತಂದೆ ಹನಮಂತ ಗೋಖರ್ (20) ಎಂದು ಗುರುತಿಸಲಾಗಿದೆ. ನವೀನ ಅವರು ಮಹಾಲಿಂಗಪುರ ಮಾರ್ಗವಾಗಿ ಮುಧೋಳ ಕಡೆಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಮುಗಳಖೋಡ ಕ್ರಾಸ್ ಬಳಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಸ್ಕೂಟರ್ ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ನವೀನ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಕಿಯ ತೀವ್ರತೆಯಿಂದ ಸ್ಕೂಟರ್ ಸಂಪೂರ್ಣ ಸುಟ್ಟು ಹೋಗಿದ್ದು, ಮೃತದೇಹ ಗುರುತು ಹಿಡಿಯಲಾಗದಷ್ಟು ಸುಟ್ಟು ಹೋಗಿರುವುದಾಗಿ ತಿಳಿದು ಬಂದಿದೆ.

ಅಪಘಾತದ ಸುದ್ದಿ ತಿಳಿದ ತಕ್ಷಣ ಮುಧೋಳ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಯುವಕನ ಅಕಾಲಿಕ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ. ಅಪಘಾತಕ್ಕೆ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande