

ಕೊಪ್ಪಳ, 22 ಜೂನ್ (ಹಿ.ಸ.) :
ಆ್ಯಂಕರ್ : ಜೂನ್ 25 ರಂದು ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಿರುವ 33 ಸ್ವಿಲ್ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರದ ಸಚಿವರುಗಳು ಹಾಗೂ ಮೂರು ರಾಜ್ಯಗಳಿಗೆ ಸಂಬ0ಧಪಟ್ಟ ಇಲಾಖೆ ಸಚಿವರುಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯುವ ಮುನಿರಾಬಾದ್ನ ಸರ್ಕಾರಿ ಶಾಲಾ ಆವರಣ ಹಾಗೂ ಐಆರ್ಬಿಯ ಹೆಲಿಪ್ಯಾಡ್ಗಳಿಗೆ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಶಿವರಾಜ ತಂಗಡಗಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಮಾಜಿ ಸಚಿವರಾದ ಅಮರೇಗೌಡ ಪಾಟೀಲ ಬಯ್ಯಾಪೂರ, ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ದಿ, ವಿಜಯನಗರ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ವಿಜಯನಗರ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ.ಮಂಜುನಾಥ, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮ್ಮಿನಬಾವಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ಕುಮಾರ, ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್ನ ಅಧೀಕ್ಷಕ ಅಭಿಯಂತರರು ಎಸ್.ಬಿ ಮಲ್ಲಿಗೆವಾಡ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್