ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಪುಣ್ಯಸ್ಮರಣೆ ; ಬಿಜೆಪಿ ಕಾರ್ಯಕರ್ತರಿಂದ ಗೌರವ ನಮನ
ಬಾಗಲಕೋಟೆ, 23 ಜೂನ್ (ಹಿ.ಸ.) : ಆಂಕರ್ : ಭಾರತೀಯ ಜನಸಂಘದ ಸಂಸ್ಥಾಪಕರಾದ ಹಾಗೂ ರಾಷ್ಟ್ರದ ಪ್ರಮುಖ ಚಿಂತಕರಾಗಿದ್ದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆಯನ್ನು ಬಾಗಲಕೋಟೆ ನಗರದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ನಗರದ ಶಿವಾನಂದ ಜಿನನಲ್ಲಿರುವ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಬಾಗಲ
ಸ್ಮರಣೆ


ಬಾಗಲಕೋಟೆ, 23 ಜೂನ್ (ಹಿ.ಸ.) :

ಆಂಕರ್ : ಭಾರತೀಯ ಜನಸಂಘದ ಸಂಸ್ಥಾಪಕರಾದ ಹಾಗೂ ರಾಷ್ಟ್ರದ ಪ್ರಮುಖ ಚಿಂತಕರಾಗಿದ್ದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆಯನ್ನು ಬಾಗಲಕೋಟೆ ನಗರದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು.

ನಗರದ ಶಿವಾನಂದ ಜಿನನಲ್ಲಿರುವ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಬಾಗಲಕೋಟೆ ಮತಕ್ಷೇತ್ರ ಬಿಜೆಪಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರು ದೇಶದ ಏಕತೆ, ಅಖಂಡತೆ ಹಾಗೂ ರಾಷ್ಟ್ರೀಯ ವಿಚಾರಧಾರೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ನಾಯಕರು ಎಂದು ಸ್ಮರಿಸಿದರು.

ಭಾರತೀಯ ಜನಸಂಘದ ಮೂಲಕ ದೇಶದ ರಾಜಕೀಯ ಕ್ಷೇತ್ರದಲ್ಲಿ ಹೊಸ ಚಿಂತನೆಗೆ ದಾರಿ ಮಾಡಿಕೊಟ್ಟ ಅವರು, ತಮ್ಮ ತತ್ವ-ಸಿದ್ಧಾಂತಗಳ ಮೂಲಕ ಇಂದಿಗೂ ಜನರ ಮನಸ್ಸಿನಲ್ಲಿ ಉಳಿದಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ನಾರಾಯಣಸಾ ಭಾಂಡಗೆ, ಡಾ. ಎಂ. ಎಸ್. ದಡ್ಡೆನ್ನವರ, ಗುಂಡುರಾವ ಶಿಂಧೆ, ಬಸವರಾಜ ಯಂಕಂಚಿ, ಸತ್ಯನಾರಾಯಣ ಹೆಮಾದ್ರಿ, ಸುರೇಶ ಕೋಣ್ಣೂರ, ಕಲ್ಲಪ್ಪ ಭಗವತಿ, ಮಲ್ಲೇಶ ವಿಜಾಪುರ, ಶ್ರೀಮತಿ ಸವಿತಾ ಲಂಕೆನ್ನವರ, ರೇಖಾ ಕಲಬುರಗಿ, ಬಸವರಾಜ ಹುನಗುಂದ, ಉಮೇಶ ಹಂಚಿನಾಳ, ರವಿ ದಾಮಜಿ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಆದರ್ಶಗಳು ಹಾಗೂ ದೇಶ ಸೇವೆಯ ಸಂದೇಶವನ್ನು ಮುಂದುವರಿಸುವ ಸಂಕಲ್ಪವನ್ನು ಮುಖಂಡರು ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande