
ಬಳ್ಳಾರಿ, 23 ಜೂನ್ (ಹಿ.ಸ.) :
ಆ್ಯಂಕರ್ : ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ (ಸ್ವಾಯತ್ತ) ಕಾಲೇಜಿನಲ್ಲಿ ಮಂಗಳವಾರ ವಿದ್ಯಾರ್ಥಿಗಳಿಗಾಗಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ‘ಎಸ್.ಐ.ಆರ್’ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ.ಬಸಪ್ಪ ಅವರು ಮಾತನಾಡಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಪ್ರತಿಯೊಬ್ಬ ಅರ್ಹ ಯುವಕ-ಯುವತಿಯರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳುವುದು ಅತ್ಯಗತ್ಯ ಎಂದು ತಿಳಿಸಿದರು.
18 ವರ್ಷ ತುಂಬುವ ಎಲ್ಲಾ ಪದವಿ ವಿದ್ಯಾರ್ಥಿಗಳು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡವಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲದೆ, ತಮ್ಮ ಮೊಬೈಲ್ ಮೂಲಕವೇ ‘ವೋಟರ್ ಹೆಲ್ಪ್ ಲೈನ್’ ಆಪ್ ಅಥವಾ ರಾಷ್ಟ್ರೀಯ ಮತದಾರರ ಸೇವಾ ಪೆÇೀರ್ಟಲ್ ವೆಬ್ಸೈಟ್ ಬಳಸಿ ಸುಲಭವಾಗಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದರು.
ಈ ವೇಳೆ ಅತಿಥಿ ಉಪನ್ಯಾಸಕ ಡಾ. ತಿರುಮಲ ಅವರು ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್