
ಬಳ್ಳಾರಿ, 23 ಜೂನ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದೊಂದಿಗೆ ಭಾರತ್ ಫೈನಾನ್ಷಿಯಲ್ ಇನ್ಕ್ಲೂಷನ್ ಲಿಮಿಟೆಡ್ ಸಂಸ್ಥೆಯು ವಿವಿಧ ಹುದ್ದೆಗಳ ಭರ್ತಿಗಾಗಿ ಜೂನ್ 25 ರ ಗುರುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಿದೆ.
ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ ಹಾಗೂ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿ ಇಬ್ಬರಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
*ಸಂದರ್ಶನ ನಡೆಯುವ ಸ್ಥಳ:*
ಭರತ್ ಫೈನಾನ್ಷಿಯಲ್ ಇನ್ಕ್ಲೂಷನ್ ಲಿಮಿಟೆಡ್, ಮನೆ ನಂ. 75, ವಾರ್ಡ್ ನಂ. 33, ಸಂಜಯ ಗಾಂಧಿ ನಗರ, ಇನ್ಫಾಂಟ್ರಿ ರಸ್ತೆ, ಅಗ್ನಿಶಾಮಕ ಠಾಣೆ ಹತ್ತಿರ, ಬಳ್ಳಾರಿ.
ವಿದ್ಯಾರ್ಹತೆ ಪಿಯುಸಿ ಅಥವಾ ಯಾವುದೇ ಪದವಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳಿಗೆ ದ್ವಿಚಕ್ರ ವಾಹನ ಇರುವುದು ಕಡ್ಡಾಯವಾಗಿದೆ.
ಸಂದರ್ಶನದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಯೊಂದಿಗೆ ನಿಗದಿತ ಸಮಯಕ್ಕೆ ಸಂದರ್ಶನ ಸ್ಥಳದಲ್ಲಿ ಹಾಜರಿರಬೇಕು.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.7619207762, 9663263086, 7676774293, 6360408094 ಅನ್ನು ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್