ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳನ್ನು ಒಳಪಡಿಸಿ
ಕೊಪ್ಪಳ, 23 ಜೂನ್ (ಹಿ.ಸ.) : ಆ್ಯಂಕರ್ : 2026-27ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ರೈತರು ತಮ್ಮ ತೋಟಗಾರಿಕೆ ಬೆಳೆಗಳನ್ನು ವಿಮೆಗೆ ಒಳಪಡಿಸಬಹುದು ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾದ ಕೃಷ್ಣ ಸಿ. ಉಕ್ಕುಂದ ಅವರು ತಿಳಿಸಿದ
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳನ್ನು ಒಳಪಡಿಸಿ


ಕೊಪ್ಪಳ, 23 ಜೂನ್ (ಹಿ.ಸ.) :

ಆ್ಯಂಕರ್ : 2026-27ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ರೈತರು ತಮ್ಮ ತೋಟಗಾರಿಕೆ ಬೆಳೆಗಳನ್ನು ವಿಮೆಗೆ ಒಳಪಡಿಸಬಹುದು ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾದ ಕೃಷ್ಣ ಸಿ. ಉಕ್ಕುಂದ ಅವರು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರವು 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಮತ್ತು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮಂಜೂರಾತಿ ನೀಡಿದೆ.

ಈ ಯೋಜನೆಯಡಿ ಜಿಲ್ಲೆಯ ಎಲ್ಲಾ ರೈತರು ಪಪ್ಪಾಯ, ಮಾವು, ದ್ರಾಕ್ಷಿ, ದಾಳಿಂಬೆ, ಹಸಿಮೆಣಸಿನಕಾಯಿ ಮತ್ತು ಈರುಳ್ಳಿ (ನೀರಾವರಿ) ಟಮ್ಯಾಟೋ, ಈರುಳ್ಳಿ (ಮಳೆ ಆಶ್ರಿತ) ಬೆಳೆಗಳನ್ನು ವಿಮೆಗೆ ಒಳಪಡಿಸಬಹುದು. ತಮ್ಮ ಪಾಲಿನ ವಿಮಾ ವಂತಿಗೆಯನ್ನು ಜುಲೈ 31 ರೊಳಗೆ ಪಾವತಿಸಿದಲ್ಲಿ ಈ ಯೋಜನೆಯಡಿ ಪ್ರ್ರಯೋಜನೆ ಪಡೆಯಬಹುದು. ಇದಕ್ಕಾಗಿ ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ (ಆರ್-ಡಬ್ಲ್ಯು.ಬಿ.ಸಿ.ಐ.ಎಸ್) ಹಾಗೂ ಇಫ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕೊ. ಲಿ. ಕಂಪನಿ (ಪಿ.ಎಂ.ಎಫ್.ಬಿ.ವೈ) ರವರನ್ನು ಆಯ್ಕೆಮಾಡಿರುತ್ತಾರೆ.

ವಿಮಾ ಮೊತ್ತವು ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ಒಂದೇ ಆಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ಬೆಳೆ ವಿಮಾ ಕಟ್ಟಲು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ, ಗ್ರಾಮ್ ಒನ್, ಕನಾಟಕ ಒನ್ ಕೇಂದ್ರಗಳಿಗೆ ನಿಗದಿತ ಅರ್ಜಿಗಳೊಂದಿಗೆ ಬೆಳೆ ಸಮೀಕ್ಷೆ ತಂತ್ರಾಂಶದ ಆಧಾರದ ಮೇಲೆ ಭೂಮಿ ಹೊಂದಿದ ದಾಖಲೆಗಳಾದ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಆಧಾರ ಕಾರ್ಡ್ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಸಂಪರ್ಕಿಸಬಹುದು.

ಯೋಜನೆಯ ರೂಪರೇಷೆಗಳು ಮತ್ತು ವಿವರಗಳು, ತಾಲ್ಲೂಕು ಹಾಗೂ ಬೆಳೆಗಳ ಪಟ್ಟಿಗಳ ವಿವರವನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಜುಲೈ 31ರ ಒಳಗಾಗಿ ಸಮೀಪದ ತಾಲ್ಲೂಕು, ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳು ಹಾಗೂ ಕೃಷಿ ಅಧಿಕಾರಿಗಳು, ಅಥವಾ ಸಮೀಪದ ಯಾವುದೇ ಬ್ಯಾಂಕ್ಗಳಿಗೆ, ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮ ಪಂಚಾಯತಿ ಮತ್ತು ಬೆಳೆಗಳ ಬಗ್ಗೆ ಮಾಹಿತಿ ಪಡೆದಕೊಳ್ಳುವಂತೆ ಕೊಪ್ಪಳ ತೋಟಗಾರಿಕೆ ಇಲಾಖೆಯ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande