
ವಿಜಯಪುರ, 23 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಗೊಲ್ಲರ ಓಣಿಯಲ್ಲಿ 2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ಆಂತರಿಕ ರಸ್ತೆ ನಿರ್ಮಾಣ ಕಾಮಗಾರಿಗೆ ಇಂದು ಶಾಸಕ ಅಶೋಕ್ ಮನಗೂಳಿ ಭೂಮಿ ಪೂಜೆ ನೆರವೇರಿಸಿದರು.
ಅಂದಾಜು ₹50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ರಸ್ತೆ ಕಾಮಗಾರಿಯಿಂದ ಗೊಲ್ಲರ್ ಓಣಿ ನಿವಾಸಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಸಂಚಾರ ವ್ಯವಸ್ಥೆ ಸುಗಮಗೊಳ್ಳಲಿದೆ. ಹಲವು ವರ್ಷಗಳಿಂದ ರಸ್ತೆ ಸಮಸ್ಯೆಯಿಂದ ಬಳಲುತ್ತಿದ್ದ ಸ್ಥಳೀಯರ ಬೇಡಿಕೆಗೆ ಸ್ಪಂದಿಸಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಕಾಮಗಾರಿ ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಯಿತು.
ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande