ಜೂ.27 ರಂದು ಕೆಂಪೇಗೌಡ ಜಯಂತಿ
ಬಳ್ಳಾರಿ, 23 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಜೂ.27 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್ಕುಮಾರ್ ರಸ್ತೆಯ ಸಾಂಸ್ಕ್ರತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಶ್ರೀ ಕೆಂಪೇಗೌಡ ಜ
ಜೂ.27 ರಂದು  ಕೆಂಪೇಗೌಡ ಜಯಂತಿ


ಜೂ.27 ರಂದು  ಕೆಂಪೇಗೌಡ ಜಯಂತಿ


ಬಳ್ಳಾರಿ, 23 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಜೂ.27 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್ಕುಮಾರ್ ರಸ್ತೆಯ ಸಾಂಸ್ಕ್ರತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ಶಾಸಕ ನಾರಾ ಭರತ್ರೆಡ್ಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ.

ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾಪ್ರೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷ್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಭಾಗವಹಿಸುವರು.

ಕುರುಗೋಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ.ಶಶಿಕಾಂತ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು.

ಬಳ್ಳಾರಿಯ ಎಸ್.ಲಕ್ಷ್ಮೀ ಪವನ್ ಕುಮಾರ್ ತಂಡದಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಲಿವೆ.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿರುವರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande