
ಬಳ್ಳಾರಿ, 23 ಜೂನ್ (ಹಿ.ಸ.) :
ಆ್ಯಂಕರ್ : ಸಂಡೂರು ತಾಲೂಕಿನ ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿರುವ ಹೆಚ್.ಎಲ್.ಸಿ ಕಾಲುವೆಯಿಂದ ಕುರೇಕುಪ್ಪ ಸಣ್ಣ ಕಾಲುವೆಗೆ ಮಾಜಿ ಶಾಸಕರಾದ ದಿವಂಗತ ‘ಯು ಭೂಪತಿ ನಾಲೆ’ ಎಂದು ನಾಮಕರಣ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಜೂ.01 ರಂದು ನಡೆದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ನಾಮಕರಣದ ಕುರಿತು ಪ್ರಸ್ತಾವನೆಯನ್ನು ಮಂಡಿಸಲಾಗಿದೆ.
ಈ ನಾಮಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಯಾವುದೇ ರೀತಿಯ ಸಲಹೆಗಳು ಅಥವಾ ಆಕ್ಷೇಪಣೆಗಳಿದ್ದಲ್ಲಿ, ಜುಲೈ 21 ರ ಒಳಗಾಗಿ ಕುರೇಕುಪ್ಪ ಪುರಸಭೆಗೆ ಲಿಖಿತ ರೂಪದಲ್ಲಿ ಸಲ್ಲಿಸಬೇಕು.
ನಿಗದಿತ ಅವಧಿಯೊಳಗೆ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆಗಳು ಬಾರದಿದ್ದಲ್ಲಿ, ಸರ್ಕಾರದ ಸುತ್ತೋಲೆಯ ಪ್ರಕಾರ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್