

ಬಳ್ಳಾರಿ, 23 ಜೂನ್ (ಹಿ.ಸ.) :
ಆ್ಯಂಕರ್ : ಸಿರುಗುಪ್ಪ ತಾಲೂಕಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಿಪ್ಪೇಸ್ವಾಮಿ ಅವರ ಕುಡತಿನಿಯ ಮನೆ, ಬಳ್ಳಾರಿಯ ಮನೆ ಮತ್ತು ಸಿರುಗುಪ್ಪದ ಕಚೇರಿಯ ಮೇಲೆ ಲೋಕಾಯುಕ್ತ ಪೆÇಲೀಸರು ಏಕಕಾಲದಲ್ಲಿ ಮಂಗಳವಾರ ಬೆಳಗ್ಗೆ ದಾಳಿ ನಡೆಸಿ, ಅಕ್ರಮ ಗಳಿಕೆಯನ್ನು - ಬೆಳ್ಳಿ ಮತ್ತು ಬಂಗಾರದ ಆಭರಣಗಳನ್ನು, ಆಸ್ತಿಗಳನ್ನು ಪತ್ತೆ ಮಾಡಿದ್ದಾರೆ.
ಲೋಕಾಯುಕ್ತ ಅಧಿಕಾರಿ ವಾಸುದೇವ್ ಅವರ ನೇತೃತ್ವದಲ್ಲಿ ಮೂರು ತಂಡಗಳು ಕಾರ್ಯಾಚರಣೆ ನಡೆದಿದ್ದು, ಬಳ್ಳಾರಿಯ ಹನುಮಾನ್ ನಗರದಲ್ಲಿರುವ ತಿಪ್ಪೇಸ್ವಾಮಿ ಅವರ ಮನೆ, ಕುಡತಿನಿ ಪಟ್ಟಣದಲ್ಲಿರುವ ಅವರ ಮೂಲ ಮನೆ ಹಾಘೂ ಸಿರುಗುಪ್ಪದಲ್ಲಿರುವ ಅವರ ಕಚೇರಿಯ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. ಬಳ್ಳಾರಿ ಮತ್ತು ಕುಡತಿನಿ ಮನೆಯಲ್ಲಿ ತಿಪ್ಪೇಸ್ವಾಮಿ ಅವರ ಅಕ್ರಮ ಗಳಿಗೆಯ ಆಸ್ತಿಪಾಸ್ತಿ, ಆಭರಣಗಳು ಮತ್ತು ಅಲ್ಪ ನಗದು ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ.
ತಿಪ್ಪೇಸ್ವಾಮಿ ಅವರ ಬ್ಯಾಂಕ್ ಖಾತೆಗಳು ಹಾಗೂ ಲಾಕರ್ಗಳನ್ನು ಪರಿಶೀಲನೆ ಮಾಡಿದ ಲೋಕಾಯುಕ್ತರು, ಪರಿಶೀಲನೆಯನ್ನು ಮುಂದುವರೆಸಿದ್ದಾರೆ.
ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್