ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಕಾರ್ಯಕ್ರಮ ; ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಶಾಸಕ ಅಶೋಕ ಮನಗೂಳಿ ಮನವಿ
ವಿಜಯಪುರ, 23 ಜೂನ್ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಆಲಮೇಲ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮವನ್ನು ಇದೇ ಜೂನ್ 25ರಂದು ಅದ್ಧೂರಿಯಾಗಿ ಆಯೋಜಿಸಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿ
Programs


ವಿಜಯಪುರ, 23 ಜೂನ್ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಆಲಮೇಲ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮವನ್ನು ಇದೇ ಜೂನ್ 25ರಂದು ಅದ್ಧೂರಿಯಾಗಿ ಆಯೋಜಿಸಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಜನರ ಬಹುದಿನಗಳ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಆಲಮೇಲ ತಾಲ್ಲೂಕಿನಲ್ಲಿ ನಡೆಯಲಿರುವ ಈ ಮಹತ್ವದ ಕಾರ್ಯಕ್ರಮದಲ್ಲಿ ಹಲವು ಜನಪರ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವುದರ ಜೊತೆಗೆ ಪೂರ್ಣಗೊಂಡ ಕಾಮಗಾರಿಗಳನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮಕ್ಕೆ ರಾಜ್ಯದ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ, ಸಚಿವರಾದ ಎಂ.ಬಿ. ಪಾಟೀಲ, ಮಾಜಿ ಸಚಿವರಾದ ಶಿವಾನಂದ ಪಾಟೀಲ ಸೇರಿದಂತೆ ಹಲವು ಗಣ್ಯರು ಆಗಮಿಸಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಿಂದಗಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಮನವಿ ಮಾಡಿದ್ದಾರೆ.

ಕ್ಷೇತ್ರದ ಅಭಿವೃದ್ಧಿಯ ಪಯಣದಲ್ಲಿ ಈ ಕಾರ್ಯಕ್ರಮವು ಮಹತ್ವದ ಹೆಜ್ಜೆಯಾಗಲಿದ್ದು, ಜನರ ಸಹಭಾಗಿತ್ವದಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande