ರಾಜ್ಯದಲ್ಲಿ ಮುಂದಿನ 7 ದಿನ ಮಳೆ ಮುಂದುವರಿಕೆ
ಬೆಂಗಳೂರು, 23 ಜೂನ್ (ಹಿ.ಸ.) : ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಮುಂದಿನ ಏಳು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯಲಿದೆ. ಹಲವೆಡೆ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜ
ಮುನ್ಸೂಚನೆ


ಬೆಂಗಳೂರು, 23 ಜೂನ್ (ಹಿ.ಸ.) :

ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಮುಂದಿನ ಏಳು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯಲಿದೆ. ಹಲವೆಡೆ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಜೂನ್ 26 ಮತ್ತು 27ರಂದು ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಇದೇ ವೇಳೆ, ರಾಜ್ಯದ ಒಳನಾಡು ಭಾಗಗಳಲ್ಲಿಯೂ ಮಳೆಯ ಚಟುವಟಿಕೆ ಹೆಚ್ಚಾಗಲಿದ್ದು, ಜೂನ್ 26 ಮತ್ತು 27ರಂದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಜೊತೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಹವಾಮಾನ ಇಲಾಖೆ ಮೀನುಗಾರರು, ರೈತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ನದಿ, ಹಳ್ಳ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande