
ನವದೆಹಲಿ, 23 ಜೂನ್ (ಹಿ.ಸ.) :
ಆ್ಯಂಕರ್ : ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿವಸದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಪ್ರಧಾನಿ ಮೋದಿ, “ಭಾರತದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ ಮಹಾನ್ ದೇಶಭಕ್ತ, ಪ್ರಖರ ಚಿಂತಕ ಹಾಗೂ ರಾಜಕಾರಣಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ನಾನು ಗೌರವ ಸಲ್ಲಿಸುತ್ತೇನೆ. ಸಾರ್ವಜನಿಕ ಜೀವನದಲ್ಲಿ ಅವರು ಪ್ರದರ್ಶಿಸಿದ ಅಚಲ ಸಂಕಲ್ಪ, ಧೈರ್ಯ ಮತ್ತು ರಾಷ್ಟ್ರಹಿತದ ಮೇಲಿನ ಬದ್ಧತೆ ಇಂದಿಗೂ ಅನೇಕ ಪೀಳಿಗೆಗಳಿಗೆ ಸ್ಫೂರ್ತಿಯಾಗಿದೆ” ಎಂದು ತಿಳಿಸಿದ್ದಾರೆ.
“ಡಾ. ಮುಖರ್ಜಿ ಅವರ ತ್ಯಾಗವು ನಮ್ಮ ರಾಷ್ಟ್ರೀಯ ಸ್ಮರಣೆಯಲ್ಲಿ ಸದಾ ಅಚ್ಚಳಿಯದೆ ಉಳಿದಿದೆ. ಅವರು ತಮ್ಮ ಕೊನೆಯ ಉಸಿರಿನವರೆಗೂ ಪಾಲಿಸಿದ ಆದರ್ಶಗಳು ಮತ್ತು ಮೌಲ್ಯಗಳು ನಮಗೆ ಮಾರ್ಗದರ್ಶನ ನೀಡುತ್ತಿವೆ. ಅವರ ಚಿಂತನೆಗಳಿಂದ ಪ್ರೇರಿತರಾಗಿ ಬಲಿಷ್ಠ, ಸಮೃದ್ಧ ಮತ್ತು ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದ ನಮ್ಮ ಸಂಕಲ್ಪವನ್ನು ನಾವು ಮತ್ತೊಮ್ಮೆ ಪುನರುಚ್ಚರಿಸುತ್ತೇವೆ” ಎಂದು ಪ್ರಧಾನಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.