ಬೃಹತ್ ಮರ ಬಿದ್ದು ಇಬ್ರಾಹಿಂ ರೋಜಾ ಸುತ್ತಮುತ್ತ ಕತ್ತಲು ; 10ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿ ಜನರ ಪರದಾಟ
ವಿಜಯಪುರ, 23 ಜೂನ್ (ಹಿ.ಸ.) : ಆಂಕರ್ : ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸುತ್ತಮುತ್ತಲಿನ ಪ್ರದೇಶವು ರಾತ್ರೋರಾತ್ರಿ ಕತ್ತಲಲ್ಲಿ ಮುಳುಗಿದ್ದು, ಬೃಹತ್ ಮರ ಬಿದ್ದ ಪರಿಣಾಮ ವಿದ್ಯುತ್ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಾತ್ರಿ ವೇಳೆ ಬೃಹತ್ ಮರವೊಂದು ಧರೆಗುರುಳಿದ ಪರಿಣಾಮ ಒಂದು ಕ
Mar


ವಿಜಯಪುರ, 23 ಜೂನ್ (ಹಿ.ಸ.) :

ಆಂಕರ್ : ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸುತ್ತಮುತ್ತಲಿನ ಪ್ರದೇಶವು ರಾತ್ರೋರಾತ್ರಿ ಕತ್ತಲಲ್ಲಿ ಮುಳುಗಿದ್ದು, ಬೃಹತ್ ಮರ ಬಿದ್ದ ಪರಿಣಾಮ ವಿದ್ಯುತ್ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ರಾತ್ರಿ ವೇಳೆ ಬೃಹತ್ ಮರವೊಂದು ಧರೆಗುರುಳಿದ ಪರಿಣಾಮ ಒಂದು ಕಾರು ಹಾಗೂ ಒಂದು ಜೀಪು ಹಾನಿಗೊಳಗಾಗಿದ್ದು, 10ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಇದರಿಂದ ಇಬ್ರಾಹಿಂ ರೋಜಾ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡು, ಸಾರ್ವಜನಿಕರು ಇಡೀ ದಿನ ವಿದ್ಯುತ್ ವ್ಯತ್ಯಯದ ಸಮಸ್ಯೆ ಎದುರಿಸುವಂತಾಗಿದೆ.

ವಿದ್ಯುತ್ ಕಂಬಗಳು ಬಿದ್ದಿರುವುದರಿಂದ ರಸ್ತೆ ಸುರಕ್ಷತೆಗೂ ಆತಂಕ ಎದುರಾಗಿದ್ದು, ಸ್ಥಳೀಯ ನಿವಾಸಿಗಳು ಹಾಗೂ ವ್ಯಾಪಾರಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ತುರ್ತು ದುರಸ್ತಿ ಕಾರ್ಯ ಕೈಗೊಂಡು ಶೀಘ್ರ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಸ್ಥಳೀಯ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರ ತೆರವು ಹಾಗೂ ವಿದ್ಯುತ್ ವ್ಯವಸ್ಥೆ ಪುನರ್ ಸ್ಥಾಪನೆ ಕಾರ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

ಪ್ರವಾಸಿಗರ ಆಕರ್ಷಣೆಯಾದ ಇಬ್ರಾಹಿಂ ರೋಜಾ ಪ್ರದೇಶದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಪಾಯಕಾರಿ ಮರಗಳ ಪರಿಶೀಲನೆ ನಡೆಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande