ಕೇಂದ್ರ ಸಚಿವ ಸಂಪುಟಕ್ಕೆ ಜಾರ್ಜ್ ಕುರಿಯನ್ ರಾಜೀನಾಮೆ
ನವದೆಹಲಿ, 23 ಜೂನ್ (ಹಿ.ಸ.) : ಆ್ಯಂಕರ್ : ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳು ಹಾಗೂ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆಗಳ ರಾಜ್ಯ ಸಚಿವರಾಗಿದ್ದ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ಭವನ ಬಿಡುಗಡೆ ಮಾಡಿರುವ ಅಧಿಕೃತ ಪ್ರಕಟಣೆ
ರಾಷ್ಟ್ರಪತಿ ಭವನದ ಪ್ರಕಟಣೆ


ನವದೆಹಲಿ, 23 ಜೂನ್ (ಹಿ.ಸ.) :

ಆ್ಯಂಕರ್ : ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳು ಹಾಗೂ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆಗಳ ರಾಜ್ಯ ಸಚಿವರಾಗಿದ್ದ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಷ್ಟ್ರಪತಿ ಭವನ ಬಿಡುಗಡೆ ಮಾಡಿರುವ ಅಧಿಕೃತ ಪ್ರಕಟಣೆಯ ಪ್ರಕಾರ, ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಜಾರ್ಜ್ ಕುರಿಯನ್ ಅವರ ರಾಜೀನಾಮೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ.

ಈ ನಿರ್ಧಾರವನ್ನು ಭಾರತದ ಸಂವಿಧಾನದ 75ನೇ ವಿಧಿಯ (2)ನೇ ಉಪವಿಧಿಯ ಅನ್ವಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande