ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡಿ ; ಸಚಿವ ಎಂ.ಬಿ. ಪಾಟೀಲ್ ಮನವಿ
ವಿಜಯಪುರ, 23 ಜೂನ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ಹೈಕಮಾಂಡ್ಗೆ ಮನವಿ ಸಲ್ಲಿಸಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂ
MBP


ವಿಜಯಪುರ, 23 ಜೂನ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ಹೈಕಮಾಂಡ್ಗೆ ಮನವಿ ಸಲ್ಲಿಸಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ನೀಡುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಗಮನಕ್ಕೂ ಈ ವಿಚಾರವನ್ನು ತಂದಿದ್ದೇನೆ ಎಂದು ಹೇಳಿದರು.

“ವಿಜಯಪುರ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ನೀಡುವಂತೆ ನಾನು ಮನವಿ ಮಾಡಿದ್ದೇನೆ. ನನ್ನ ಮನವಿಗೆ ಹೈಕಮಾಂಡ್ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಎಂಬ ವಿಶ್ವಾಸವಿದೆ. ಆದರೆ ಅಂತಿಮ ನಿರ್ಧಾರವನ್ನು ಪಕ್ಷದ ವರಿಷ್ಠರು ಹಾಗೂ ನಾಯಕರು ಕೈಗೊಳ್ಳುತ್ತಾರೆ” ಎಂದು ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದರು.

ಜಿಲ್ಲೆಯ ಅಭಿವೃದ್ಧಿ, ಆಡಳಿತಾತ್ಮಕ ಪ್ರಾತಿನಿಧ್ಯ ಹಾಗೂ ಜನರ ಹಿತದೃಷ್ಟಿಯಿಂದ ಸಚಿವ ಸ್ಥಾನ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು. ಸಚಿವ ಸಂಪುಟ ವಿಸ್ತರಣೆ ಅಥವಾ ಬದಲಾವಣೆ ಕುರಿತ ಯಾವುದೇ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ಎಂ.ಬಿ. ಪಾಟೀಲ್ ಅವರ ಈ ಹೇಳಿಕೆ ವಿಜಯಪುರ ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಸಿಗುತ್ತದೆಯೇ ಎಂಬ ಕುತೂಹಲ ಮೂಡಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande