ಭೋವಿ ವಡ್ಡರ ಸಮಾಜದಿಂದ ಶಿವರಾಜ ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ
ಬಾಗಲಕೋಟೆ, 24 ಜೂನ್ (ಹಿ.ಸ.) : ಆಂಕರ್ : ಕನಕಗಿರಿ ವಿಧಾನ ಸಭಾ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಭೋವಿ ವಡ್ಡರ ಸಮಾಜದ ವತಿಯಿಂದ ಒತ್ತಾಯ ವ್ಯಕ್ತಪಡಿಸಲಾಯಿತು. ಭೋವಿ ವಡ್ಡರ ಸಮಾಜದ ಮು
Demand


ಬಾಗಲಕೋಟೆ, 24 ಜೂನ್ (ಹಿ.ಸ.) :

ಆಂಕರ್ : ಕನಕಗಿರಿ ವಿಧಾನ ಸಭಾ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಭೋವಿ ವಡ್ಡರ ಸಮಾಜದ ವತಿಯಿಂದ ಒತ್ತಾಯ ವ್ಯಕ್ತಪಡಿಸಲಾಯಿತು.

ಭೋವಿ ವಡ್ಡರ ಸಮಾಜದ ಮುಖಂಡರು ಹಾಗೂ ಕಾರ್ಯಕರ್ತರು ಮಾತನಾಡಿ, ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಹಾಗೂ ಜನಪರ ಕಾಳಜಿ ಹೊಂದಿರುವ ಶಿವರಾಜ ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಸಮಾಜಕ್ಕೆ ಹೆಚ್ಚಿನ ಪ್ರಾತಿನಿಧ್ಯ ದೊರೆಯಲಿದೆ ಎಂದು ಹೇಳಿದರು.

ರಾಜ್ಯದ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡಿರುವ ತಂಗಡಗಿ ಅವರು ಹಿಂದುಳಿದ ವರ್ಗಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಬಂದಿದ್ದಾರೆ. ಅವರ ಅನುಭವ ಮತ್ತು ಕಾರ್ಯಕ್ಷಮತೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕು ಎಂದು ಮುಖಂಡರು ಮನವಿ ಮಾಡಿದರು.

ಮಹಾಲಿಂಗಪುರದಲ್ಲಿ ನಡೆದ ಸಭೆಯಲ್ಲಿ ಭೋವಿ ವಡ್ಡರ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಸಮಾಜ ಬಾಂಧವರು ಭಾಗವಹಿಸಿ, ಪಕ್ಷದ ವರಿಷ್ಠರು ಹಾಗೂ ಸರ್ಕಾರವು ಈ ಬೇಡಿಕೆಯನ್ನು ಪರಿಗಣಿಸುವಂತೆ ಒತ್ತಾಯಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande