ಬಾಗಲಕೋಟೆ ಜಿಲ್ಲಾದ್ಯಂತ ಮೊಹರಂ ಹಿನ್ನೆಲೆ ಮದ್ಯ ಮಾರಾಟ ನಿಷೇಧ
ಬಾಗಲಕೋಟೆ, 24 ಜೂನ್ (ಹಿ.ಸ.) : ಆಂಕರ್ : ಮೊಹರಂ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜೂನ್ 24ರ ಮಧ್ಯರಾತ್ರಿಯಿಂದ ಜೂನ್ 26ರ ಮಧ್ಯರಾತ್ರಿವರೆಗೆ ಬಾಗಲಕೋಟೆ ಜಿಲ್ಲಾದ್ಯಂತ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷ
ಮಧ್ಯ


ಬಾಗಲಕೋಟೆ, 24 ಜೂನ್ (ಹಿ.ಸ.) :

ಆಂಕರ್ : ಮೊಹರಂ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜೂನ್ 24ರ ಮಧ್ಯರಾತ್ರಿಯಿಂದ ಜೂನ್ 26ರ ಮಧ್ಯರಾತ್ರಿವರೆಗೆ ಬಾಗಲಕೋಟೆ ಜಿಲ್ಲಾದ್ಯಂತ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮೊಹರಂ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆಯ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದ್ದು, ಪೊಲೀಸ್ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳು ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

ನಿಷೇಧದ ಅವಧಿಯಲ್ಲಿ ಮದ್ಯದ ಅಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್ಗಳು ಸೇರಿದಂತೆ ಎಲ್ಲ ರೀತಿಯ ಮದ್ಯ ಮಾರಾಟ ಕೇಂದ್ರಗಳು ಮುಚ್ಚಿರಬೇಕು ಎಂದು ಸೂಚಿಸಲಾಗಿದೆ.

ಅಲ್ಲದೆ, ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುವವರು ಅಥವಾ ಸಾಗಾಣಿಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಹಬ್ಬದ ಆಚರಣೆಗಳು ಶಾಂತಿಯುತವಾಗಿ ನಡೆಯಲು ಸಾರ್ವಜನಿಕರು ಜಿಲ್ಲಾಡಳಿತದ ಆದೇಶವನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ. ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande