‘ದೃಷ್ಟಿಹೀನರ ಪುನರ್ವಸತಿ' ಯುಜಿ ಡಿಪ್ಲೋಮಾ, ಕೋರ್ಸ್ ಆರಂಭ
ಬಳ್ಳಾರಿ, 24 ಜೂನ್ (ಹಿ.ಸ.) : ಆ್ಯಂಕರ್ : ಪಿಯುಸಿ ಉತ್ತೀರ್ಣರಾಗಿ ಸಮಾಜಸೇವೆಯೊಂದಿಗೆ ಉತ್ತಮ ಉದ್ಯೋಗಾವಕಾಶ ಹುಡುಕುತ್ತಿರುವ ವಿದ್ಯಾರ್ಥಿಗಳಿಗೆ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಹಾಗೂ ‘ದಿ ನ್ಯಾಷನಲ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್'' ಬೆಂಗಳೂರು, ಇವರ ಸಂಯುಕ್ತ ಆಶ್ರಯದಲ್ಲಿ “
‘ದೃಷ್ಟಿಹೀನರ ಪುನರ್ವಸತಿ' ಯುಜಿ ಡಿಪ್ಲೋಮಾ, ಕೋರ್ಸ್ ಆರಂಭ


ಬಳ್ಳಾರಿ, 24 ಜೂನ್ (ಹಿ.ಸ.) :

ಆ್ಯಂಕರ್ : ಪಿಯುಸಿ ಉತ್ತೀರ್ಣರಾಗಿ ಸಮಾಜಸೇವೆಯೊಂದಿಗೆ ಉತ್ತಮ ಉದ್ಯೋಗಾವಕಾಶ ಹುಡುಕುತ್ತಿರುವ ವಿದ್ಯಾರ್ಥಿಗಳಿಗೆ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಹಾಗೂ ‘ದಿ ನ್ಯಾಷನಲ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್' ಬೆಂಗಳೂರು, ಇವರ ಸಂಯುಕ್ತ ಆಶ್ರಯದಲ್ಲಿ “ದೃಷ್ಟಿಹೀನರ ಪುನರ್ವಸತಿ” ವಿಷಯದಲ್ಲಿ ಪ್ರಥಮ ಬಾರಿಗೆ ಒಂದು ವರ್ಷದ ವಿಶೇಷ ಯುಜಿ ಡಿಪ್ಲೋಮಾ, ಕೋರ್ಸ್ ಅನ್ನು ಪ್ರಾರಂಭಿಸಲಾಗಿದೆ.

ಸ್ವಯಂಸೇವಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಹಾಗೂ ವಿಕಲಚೇತನರ ಸಬಲೀಕರಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇರುವವರಿಗೆ ಈ ತರಬೇತಿ ಕಾರ್ಯಕ್ರಮ ಉಪಯೋಗವಾಗಲಿದೆ.

ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ವತಿಯಿಂದ ಡಿಪ್ಲೋಮಾ, ಪ್ರಮಾಣಪತ್ರ ನೀಡಲಾಗುತ್ತದೆ.

ಕೋರ್ಸ್ ಮುಗಿದ ನಂತರ ಅಭ್ಯರ್ಥಿಗಳಿಗೆ ರೂ.15,000/- ಶಿಷ್ಯವೇತನದೊಂದಿಗೆ ರಾಷ್ಟ್ರೀಯ ಅಂಧರ ಸಂಘದ ಸಂಸ್ಥೆಯಲ್ಲಿ ಒಂದು ವರ್ಷದ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.

ತರಬೇತಿಯ ನಂತರದ ವರ್ಷದಿಂದ ಪ್ರತಿ ತಿಂಗಳು ರೂ.23,000/- ವೇತನದೊಂದಿಗೆ ರಾಷ್ಟ್ರೀಯ ಅಂಧರ ಸಂಘ ಅಥವಾ ಇತರೆ ಪ್ರಮುಖ ಎನ್ಜಿಒಗಳಲ್ಲಿ ಉದ್ಯೋಗಾವಕಾಶ ದೊರೆಯುವ ಸಾಧ್ಯತೆ ಇರುತ್ತದೆ.

ಎನ್ಜಿಒಗಳು, ಸಮಗ್ರ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರಗಳು, ಸರ್ಕಾರ ಹಾಗೂ ಸಿ.ಎಸ್.ಆರ್ ಬೆಂಬಲಿತ ವಿಕಲಚೇತನ ಸಬಲೀಕರಣ ಕಾರ್ಯಕ್ರಮಗಳಲ್ಲಿ ಕೆಲಸ ಮಾಡಲು ಇದು ಉತ್ತಮ ವೇದಿಕೆಯಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಅಧಿಕೃತ ವೆಬ್ಸೈಟ್: www.bcu.karnataka.gov.in ಮೂಲಕವೇ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಜುಲೈ 04 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.9538653180, 6363891284, 9611924211 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande