ಶಶಿಕುಮಾರ್ ಕಾಣೆ ; ಪತ್ತೆಗಾಗಿ ಮನವಿ
ಬಳ್ಳಾರಿ, 24 ಜೂನ್ (ಹಿ.ಸ.) : ಆ್ಯಂಕರ್ : ಬಳ್ಳಾರಿಯ ಗೌತಮನಗರದ ಮಸೀದಿ ಹತ್ತಿರದ ನಿವಾಸಿಯಾದ ಶಶಿಕುಮಾರ್ (34) ಜೂನ್ 15 ರಿಂದ ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾ
ಶಶಿಕುಮಾರ್ ಕಾಣೆ; ಪತ್ತೆಗಾಗಿ ಮನವಿ


ಬಳ್ಳಾರಿ, 24 ಜೂನ್ (ಹಿ.ಸ.) :

ಆ್ಯಂಕರ್ : ಬಳ್ಳಾರಿಯ ಗೌತಮನಗರದ ಮಸೀದಿ ಹತ್ತಿರದ ನಿವಾಸಿಯಾದ ಶಶಿಕುಮಾರ್ (34) ಜೂನ್ 15 ರಿಂದ ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.

ಕಾಣೆಯಾದ ವ್ಯಕ್ತಿಯ ಚಹರೆ :

ಎತ್ತರ 6 ಅಡಿ, ದುಂಡು ಮುಖ, ಕಪ್ಪು ಮೈಬಣ್ಣ, ದೃಢವಾದ ಮೈಕಟ್ಟು ಮತ್ತು ಕಪ್ಪು ಕೂದಲು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ.

ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯ ಆದಲ್ಲಿ ಅಥವಾ ಈ ಚಹರೆಯುಳ್ಳ ವ್ಯಕ್ತಿ ಕಂಡು ಬ0ದಲ್ಲಿ ತಕ್ಷಣವೇ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392258100 ಗೆ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande