ಜೀವನದಿ ತುಂಗಭದ್ರಾ ಜಲಾಶಯಕ್ಕೆ ಹೊಸ ಕಳೆ ; ಹೊಸ ಗೇಟಗಳ ಲೋಕಾರ್ಪಣೆ
ಮುನಿರಾಬಾದ್, 24 ಜೂನ್ (ಹಿ.ಸ.) : ಆ್ಯಂಕರ್ : ಉತ್ತರ ಕರ್ನಾಟಕದ ಜೀವನದಿ ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟಗಳ ಲೋಕಾರ್ಪಣೆ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಜೂನ್ 25ರಂದು ಕಾರ್ಯಕ್ರಮ ನಿಗದಿಯಾಗಿದ್ದು, ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಗ್ರಾಮದ ಪ್ರೌಢ ಶಾಲಾ ಆವರಣದಲ್ಲಿ ಬೃಹತ್ ವೇದಿಕೆ
ಜೀವನದಿ ತುಂಗಭದ್ರಾ ಜಲಾಶಯಕ್ಕೆ ಹೊಸ ಕಳೆ: ಹೊಸ ಗೇಟಗಳ ಲೋಕಾರ್ಪಣೆ


ಜೀವನದಿ ತುಂಗಭದ್ರಾ ಜಲಾಶಯಕ್ಕೆ ಹೊಸ ಕಳೆ: ಹೊಸ ಗೇಟಗಳ ಲೋಕಾರ್ಪಣೆ


ಜೀವನದಿ ತುಂಗಭದ್ರಾ ಜಲಾಶಯಕ್ಕೆ ಹೊಸ ಕಳೆ: ಹೊಸ ಗೇಟಗಳ ಲೋಕಾರ್ಪಣೆ


ಜೀವನದಿ ತುಂಗಭದ್ರಾ ಜಲಾಶಯಕ್ಕೆ ಹೊಸ ಕಳೆ: ಹೊಸ ಗೇಟಗಳ ಲೋಕಾರ್ಪಣೆ


ಜೀವನದಿ ತುಂಗಭದ್ರಾ ಜಲಾಶಯಕ್ಕೆ ಹೊಸ ಕಳೆ: ಹೊಸ ಗೇಟಗಳ ಲೋಕಾರ್ಪಣೆ


ಮುನಿರಾಬಾದ್, 24 ಜೂನ್ (ಹಿ.ಸ.) :

ಆ್ಯಂಕರ್ : ಉತ್ತರ ಕರ್ನಾಟಕದ ಜೀವನದಿ ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟಗಳ ಲೋಕಾರ್ಪಣೆ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.

ಜೂನ್ 25ರಂದು ಕಾರ್ಯಕ್ರಮ ನಿಗದಿಯಾಗಿದ್ದು, ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಗ್ರಾಮದ ಪ್ರೌಢ ಶಾಲಾ ಆವರಣದಲ್ಲಿ ಬೃಹತ್ ವೇದಿಕೆಯು ಸಿದ್ಧವಾಗುತ್ತಿದೆ.

ಈ ಕಾರ್ಯಕ್ರಮಕ್ಕೆ ಕರ್ನಾಟಕ, ತೆಲಂಗಾಣ ಮತ್ತು ಆಂದ್ರಪ್ರದೇಶ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಸೇರುತ್ತಿರುವುದು ವಿಶೇಷತೆಯಾಗಿದೆ. ಜೊತೆಗೆ ಮೂರೂ ರಾಜ್ಯಗಳ ಸಚಿವರು, ಶಾಸಕರು, ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಸಹ ಆಗಮಿಸುತ್ತಿದ್ದಾರೆ.

ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುತ್ತಿರುವ ಮಹತ್ವದ ಈ ಕಾರ್ಯಕ್ರಮವು ಶಿಸ್ತು ಬದ್ಧವಾಗಿ ನಡೆಯುವ ದಿಶೆಯಲ್ಲಿ ಸೂಕ್ತ ಭದ್ರತೆ ಮತ್ತು ಮುನ್ನೆಚ್ಚರಿಕೆ ಕ್ರಮಗಳು ವೇಗವಾಗಿ ನಡೆಯುತ್ತಿವೆ. ರಾಜ್ಯದ ಜಲ ಸಂಪನ್ಮೂಲ ಸಚಿವರು, ತುಂಗಭದ್ರಾ ಆಣೆಕಟ್ಟಿನ ಅಚ್ಚುಕಟ್ಟು ಪ್ರದೇಶದ ಸಂಸದರು ಹಾಗೂ ಶಾಸಕರು ಹಲವು ಸಭೆಗಳನ್ನು ನಡೆಸಿ ಕಾರ್ಯಕ್ರಮದ ಸಿದ್ಧತೆಗಾಗಿ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ.

ಬಳ್ಳಾರಿ ವಲಯದ ಐಜಿಪಿ ಡಾ.ಹರ್ಷ ಪಿ ಎಸ್, ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ದಿ ಜೊತೆಗೆ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಒಗ್ಗೂಡಿ, ಅಧಿಕಾರಿಗಳೊಂದಿಗೆ ಈಗಾಗಲೇ ಹತ್ತಾರು ಸುತ್ತಿನ ಸಭೆಗಳನ್ನು ನಡೆಸಿ, ಹಲವಾರು ನಿರ್ದೇಶನಗಳನ್ನು ನೀಡಿ ಕಾರ್ಯಪ್ರವೃತ್ತರಾಗಿದ್ದಾರೆ.

ಐಜಿಪಿ ಹರ್ಷ ಅವರಿಂದ ಸಭೆ ಕಳೆದ 15 ದಿನಗಳಿಂದ ಮೇಲಿಂದ ಮೇಲೆ ಡ್ಯಾಮ್ ಪ್ರದೇಶಕ್ಕೆ ಭೇಟಿ ನೀಡುತ್ತಿರುವ

ಬಳ್ಳಾರಿ ವಲಯದ ಐಜಿಪಿ ಡಾ.ಪಿ.ಎಸ್.ಹರ್ಷ ಅವರು ಜೂನ್ 23ರಂದು ಸಹ ಮುನಿರಾಬಾದ್ ಶಾಲಾ ಮೈದಾನದಲ್ಲಿ ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಎಸ್ಪಿ, ಡಿವೈಎಸ್ಪಿ, ಸಿಪಿಐ, ಪಿಎಸ್ಐ ಸೇರಿದಂತೆ ಖಾಕಿ ಪಡೆಯೊಂದಿಗೆ ಸಭೆ ನಡೆಸಿ ಭದ್ರತಾ ಕ್ರಮಗಳಿಗೆ ಸಂಬಂಧಿಸಿದಂತೆ ಕೆಲ ಪ್ರಮುಖ ನಿರ್ದೇಶನಗಳನ್ನು ನೀಡಿದರು.

ಸ್ವಾಗತ ಕಮಾನುಗಳು : ಕಾರ್ಯಕ್ರಮಕ್ಕೆ ಆಗಮಿಸಲಿರುವ ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಢು, ತೆಲಂಗಾಣ ಮುಖ್ಯಮಂತ್ರಿ ಎ ರೇವಂತ ರೆಡ್ಡಿ ಸೇರಿದಂತೆ, ಉಪ ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು ಮತ್ತು ಇನ್ನೀತರ ಗಣ್ಯರ ಭಾವಚಿತ್ರದ ಕಮಾನುಗಳು ಕಾರ್ಯಕ್ರಮದ ಸುತ್ತಲಿನ ಪ್ರದೇಶದಲ್ಲಿ ಹಾಗೂ ಕೊಪ್ಪಳ ಮತ್ತು ಹೊಸಪೇಟೆಯ ಪ್ರಮುಖ ರಸ್ತೆಗಳಲ್ಲಿ ಕಾಣುತ್ತಿವೆ.

ತುಂಗೆಯ ಅಂಗಳದಲ್ಲಿ ಸಿಂಗಾರ: ಸಿಎಂ ಕಾರ್ಯಕ್ರಮ ಹಿನ್ನೆಲೆಯಲ್ಲಿ ತುಂಗಭದ್ರಾ ಡ್ಯಾಮನ ಸುತ್ತಲು ಸುಗಮ ರಸ್ತೆ ಸಂಚಾರಕ್ಕಾಗಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ತುಂಗೆಯ ತಟದಲ್ಲಿರುವ ಹಸಿರು ಸಿರಿಯ ಗ್ರಾಮ ಮುನಿರಾಬಾದನಲ್ಲಿನ ಪ್ರಮುಖ ರಸ್ತೆಗಳನ್ನು ಅಗಲೀಕರಣಗೊಳಿಸಲಾಗಿದೆ. ಮುಖ್ಯ ರಸ್ತೆಯಲ್ಲಿನ ರಸ್ತೆ ವಿಭಜಕಗಳಿಗೆ ಸುಣ್ಣ-ಬಣ್ಣ ಬಳಿಯಲಾಗುತ್ತಿದೆ.

ಮುನಿರಾಬಾದ್ ಸೇರಿದಂತೆ

ತುಂಗೆಯ ಅಂಗಳದಲ್ಲಿ ಎಲ್ಲೆಡೆ

ಹಬ್ಬದ ಸಂಭ್ರಮ ಕಾಣುತ್ತಿದೆ.

ರೈತರ ಮೊಗದಲ್ಲಿ ಸಂತಷ: ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಯ ಸಾವಿರಾರು ಎಕರೆ ಭೂಮಿಗೆ ನೀರುಣಿಸುವ ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟಗಳನ್ನು ಅಳವಡಿಸಿರುವುದು ಈ ಭಾಗದ ರೈತರ ಮೊಗದಲ್ಲಿ ಸಂತಷ ಮೂಡಿಸಿದೆ. ತುಂಗಭದ್ರೆಯು ಈ ವರ್ಷವೂ ತುಂಬಿಕೊಂಡು ಈ ಭಾಗದಲ್ಲಿ ಎಂದಿನಂತೆ ಎಲ್ಲೆಡೆ ಹಸಿರು ಕಾಣಲಿ ಎಂಬುದು ಈ ನೆಲದ ಜನರ ಆಶಯವಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande