ಬಳ್ಳಾರಿ : ಜೂನ್ 25 ಹಾಗೂ 26 ರಂದು ಪಡಿತರ ವಿತರಣೆಯಲ್ಲಿ ವ್ಯತ್ಯಯ
ಬಳ್ಳಾರಿ, 25 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದಲ್ಲಿ ಪ್ರಮುಖ ಮೂಲ ಸೌಕರ್ಯಗಳನ್ನು ಉನ್ನತೀಕರಿಸಿ ಸುಧಾರಿತ ಸೇವೆಯನ್ನು ಒದಗಿಸುವ ಸಲುವಾಗಿ ತಾಂತ್ರಿಕ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಾದ್ಯಂತ ಪಡಿತರ ವಿತರಣಾ ಸೇವೆಯಲ್ಲಿ ತಾತ್
ಬಳ್ಳಾರಿ : ಜೂನ್ 25 ಹಾಗೂ 26 ರಂದು ಪಡಿತರ ವಿತರಣೆಯಲ್ಲಿ ವ್ಯತ್ಯಯ


ಬಳ್ಳಾರಿ, 25 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದಲ್ಲಿ ಪ್ರಮುಖ ಮೂಲ ಸೌಕರ್ಯಗಳನ್ನು ಉನ್ನತೀಕರಿಸಿ ಸುಧಾರಿತ ಸೇವೆಯನ್ನು ಒದಗಿಸುವ ಸಲುವಾಗಿ ತಾಂತ್ರಿಕ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಾದ್ಯಂತ ಪಡಿತರ ವಿತರಣಾ ಸೇವೆಯಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಸಕಾಲ ಮಿಷನ್ನ ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಆದೇಶದಂತೆ, ರಾಜ್ಯ ದತ್ತಾಂಶ ಕೇಂದ್ರದಲ್ಲಿ ನಾಗರಿಕ ನಿರ್ವಹಣಾ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.

ಜೂನ್ 25 ರ ರಾತ್ರಿ 9 ಗಂಟೆಯಿಂದ ಜೂನ್ 26 ರ ರಾತ್ರಿ 9 ಗಂಟೆಯವರೆಗೆ (24 ಗಂಟೆಗಳ ಕಾಲ) ಅವಧಿಯಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಸರ್ವರ್ ಲಭ್ಯವಿರುವುದಿಲ್ಲ.

ಹಾಗಾಗಿ ಜಿಲ್ಲೆಯ ಪಡಿತರ ಚೀಟಿದಾರರು ಈ ಅವಧಿಯಲ್ಲಿ ಪಡಿತರ ವಿತರಣೆಯಲ್ಲಿ ಉಂಟಾಗುವ ವ್ಯತ್ಯಯಕ್ಕೆ ಸಹಕರಿಸಬೇಕೆಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande