ಮೊಹರಂ ಹಬ್ಬ : 27 ರವರೆಗೆ ಮದ್ಯ ಮಾರಾಟ ಸಂಪೂರ್ಣ ನಿಷೇಧ
ಬಳ್ಳಾರಿ, 25 ಜೂನ್ (ಹಿ.ಸ.) : ಆ್ಯಂಕರ್ : 2026 ನೇ ಸಾಲಿನ ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು
ಮೊಹರಂ ಹಬ್ಬ : 27 ರವರೆಗೆ ಮದ್ಯ ಮಾರಾಟ ಸಂಪೂರ್ಣ ನಿಷೇಧ


ಬಳ್ಳಾರಿ, 25 ಜೂನ್ (ಹಿ.ಸ.) :

ಆ್ಯಂಕರ್ : 2026 ನೇ ಸಾಲಿನ ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ.

ಇಂದು ಮೊಹರಂ ಹಬ್ಬದ ‘ಕತ್ತಲ ರಾತ್ರಿ' ಹಾಗೂ ಜೂನ್ 26 ರಂದು ಹಬ್ಬದ ಕೊನೆಯ ದಿನವಾಗಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

ಇಂದು ಬೆಳಿಗ್ಗೆ 06 ಗಂಟೆಯಿಂದ ಜೂ.27 ರ ಬೆಳಿಗ್ಗೆ 06 ಗಂಟೆಯವರೆಗೆ ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶವನ್ನು ಹೊರಡಿಸಲಾಗಿದ್ದು, ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ.

ಜಿಲ್ಲೆಯ ಎಲ್ಲ ಮದ್ಯದಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್ಗಳನ್ನು ಸಂಪೂರ್ಣವಾಗಿ ಮುಚ್ಚಲು ಸೂಚಿಸಲಾಗಿದೆ. ಆದರೆ, ಈ ಆದೇಶವು ಡಿಸ್ಟಿಲರಿಗಳಿಂದ ರಾಜ್ಯದ ವಿವಿಧ ಕೆ.ಎಸ್.ಬಿ.ಸಿ.ಎಲ್ ಡಿಪೆÇೀಗಳಿಗೆ ದಾಸ್ತಾನು ವಿಲೇವಾರಿ ಮಾಡುವ ಪ್ರಕ್ರಿಯೆಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande