ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ
ಬೆಂಗಳೂರು, 25 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ನೂತನ ಸಚಿವ ಸಂಪುಟದ ಸದಸ್ಯರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಆದೇಶದ ಪ್ರಕಾರ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ತುಮ
District in-charges list


ಬೆಂಗಳೂರು, 25 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ನೂತನ ಸಚಿವ ಸಂಪುಟದ ಸದಸ್ಯರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಆದೇಶದ ಪ್ರಕಾರ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ.

ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳು, ಸಚಿವ ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

ಸಚಿವ ಕೆ.ಜೆ. ಜಾರ್ಜ್ ಅವರಿಗೆ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದ್ದು, ಸಚಿವ ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ನಗರ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ.

ಸಚಿವ ಈಶ್ವರ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ ಜಿಲ್ಲೆಗಳು, ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳು, ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ರಾಯಚೂರು ಹಾಗೂ ಕೋಪ್ಪಳ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.

ಯು.ಟಿ. ಖಾದರ್ ಅವರಿಗೆ ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದ್ದು, ಸಚಿವ ಬೈರತಿ ಸುರೇಶ್ ಅವರಿಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.

ಇನ್ನು ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande