ತುರ್ತು ಪರಿಸ್ಥಿತಿ ಕರಾಳ ಅಧ್ಯಾಯ, ಪ್ರಜಾಪ್ರಭುತ್ವ ರಕ್ಷಕರಿಗೆ ಪ್ರಧಾನಿ ಮೋದಿ ನಮನ
ನವದೆಹಲಿ, 25 ಜೂನ್ (ಹಿ.ಸ.) : ಆ್ಯಂಕರ್ : 1975ರಲ್ಲಿ ದೇಶದಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿಯನ್ನು ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದೆಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಹೋರಾಡಿದ ಎಲ್ಲರಿಗೂ ಗೌರವ ನಮನ ಸಲ್ಲಿಸಿದ್ದಾರೆ.
Pm file photo


ನವದೆಹಲಿ, 25 ಜೂನ್ (ಹಿ.ಸ.) :

ಆ್ಯಂಕರ್ : 1975ರಲ್ಲಿ ದೇಶದಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿಯನ್ನು ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದೆಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಹೋರಾಡಿದ ಎಲ್ಲರಿಗೂ ಗೌರವ ನಮನ ಸಲ್ಲಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, “ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದೃಢವಾಗಿ ಕಾಪಾಡಿದ ಎಲ್ಲರಿಗೂ ಇಂದು ನಾವು ಗೌರವ ಸಲ್ಲಿಸುತ್ತೇವೆ” ಎಂದು ಹೇಳಿದ್ದಾರೆ.

ತುರ್ತು ಪರಿಸ್ಥಿತಿಯು ಭಾರತದ ಸಂವಿಧಾನದ ಮೇಲಿನ ನೇರ ದಾಳಿಯಾಗಿತ್ತು ಎಂದು ಉಲ್ಲೇಖಿಸಿರುವ ಪ್ರಧಾನಿ, “ಆ ಅವಧಿಯಲ್ಲಿ ನಾಗರಿಕರ ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಲಾಯಿತು. ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಲಾಯಿತು. ರಾಜಕೀಯ ನಾಯಕರು, ಪತ್ರಕರ್ತರು ಮತ್ತು ಸಮಾಜಸೇವಕರನ್ನು ಬಂಧಿಸಲಾಯಿತು. ದೇಶದ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಸಂಸ್ಥೆಗಳ ಮೇಲೆಯೂ ದಾಳಿ ನಡೆಸಲಾಯಿತು” ಎಂದು ಹೇಳಿದ್ದಾರೆ.

ಆದರೆ ಇದೇ ಅವಧಿಯಲ್ಲಿ ಅನೇಕ ಸಾಮಾನ್ಯ ನಾಗರಿಕರು ಅಸಾಧಾರಣ ಧೈರ್ಯ ಪ್ರದರ್ಶಿಸಿ ಮೌನವಾಗಿರದೆ ಸಂವಿಧಾನದ ಆದರ್ಶಗಳನ್ನು ಎತ್ತಿಹಿಡಿದಿದ್ದರು ಎಂದು ಪ್ರಧಾನಿ ಸ್ಮರಿಸಿದ್ದಾರೆ.

“ನಮ್ಮೆಲ್ಲರಿಗೂ ಸಂವಿಧಾನವು 140 ಕೋಟಿ ಭಾರತೀಯರ ಆಶಯಗಳು, ಹಕ್ಕುಗಳು ಮತ್ತು ಕರ್ತವ್ಯಗಳ ಪ್ರತೀಕವಾಗಿದೆ. ಸಂವಿಧಾನಾತ್ಮಕ ಮೌಲ್ಯಗಳನ್ನು ರಕ್ಷಿಸುವ ನಮ್ಮ ಸಾಮೂಹಿಕ ಬದ್ಧತೆಯನ್ನು ಇಂದು ಪುನರುಚ್ಚರಿಸುತ್ತೇವೆ. ಸಂವಿಧಾನದ ಸ್ಪೂರ್ತಿಯ ಮಾರ್ಗದರ್ಶನದಲ್ಲಿ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸೌಹಾರ್ದತೆಯ ತತ್ವಗಳಿಗೆ ಸದಾ ಬದ್ಧವಾಗಿರುವ ಭಾರತವನ್ನು ನಿರ್ಮಿಸೋಣ” ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande