ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟದ ರೂಪುರೇಷೆ ಸಭೆ
ವಿಜಯಪುರ, 25 ಜೂನ್ (ಹಿ.ಸ.) : ಆಂಕರ್ : ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524.256 ಮೀಟರ್ಗೆ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರದಿಂದ ಗ್ಯಾಜೆಟ್ ನೋಟಿಫಿಕೇಶನ್ ಹೊರಡಿಸುವಂತೆ ಆಗ್ರಹಿಸಿ ಹೋರಾಟ ರೂಪಿಸಲು ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ವಿಜಯಪುರದಲ್ಲಿ ನಡೆಸ
ಎತ್ತರ


ವಿಜಯಪುರ, 25 ಜೂನ್ (ಹಿ.ಸ.) :

ಆಂಕರ್ : ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524.256 ಮೀಟರ್ಗೆ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರದಿಂದ ಗ್ಯಾಜೆಟ್ ನೋಟಿಫಿಕೇಶನ್ ಹೊರಡಿಸುವಂತೆ ಆಗ್ರಹಿಸಿ ಹೋರಾಟ ರೂಪಿಸಲು ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ವಿಜಯಪುರದಲ್ಲಿ ನಡೆಸಲಾಯಿತು.

ಸಭೆಯಲ್ಲಿ ಕೃಷ್ಣಾ ನದಿ ನೀರಿನ ಸಮರ್ಪಕ ಬಳಕೆ, ಉತ್ತರ ಕರ್ನಾಟಕದ ನೀರಾವರಿ ಹಕ್ಕುಗಳು ಹಾಗೂ ಆಲಮಟ್ಟಿ ಯೋಜನೆಯ ಪೂರ್ಣ ಅನುಷ್ಠಾನದ ಕುರಿತು ಸುದೀರ್ಘ ಚರ್ಚೆ ನಡೆಯಿತು. ದಶಕಗಳಿಂದ ಬಾಕಿ ಉಳಿದಿರುವ ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ವಿಷಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಗಮನಕ್ಕೆ ತಂದು ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಳದಿಂದ ಕೃಷ್ಣಾ ಕೊಳ್ಳದ ಲಕ್ಷಾಂತರ ರೈತರಿಗೆ ನೀರಾವರಿ ಸೌಲಭ್ಯ ವಿಸ್ತರಣೆಯಾಗಲಿದ್ದು, ಬರಪೀಡಿತ ಪ್ರದೇಶಗಳಿಗೆ ಶಾಶ್ವತ ನೀರಿನ ಭದ್ರತೆ ದೊರೆಯಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಈ ಹಿನ್ನೆಲೆಯಲ್ಲಿ ಸರ್ಕಾರಗಳು ವಿಳಂಬ ಮಾಡದೆ ಅಗತ್ಯ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸದಸ್ಯರು ಆಗ್ರಹಿಸಿದರು.

ಸಭೆಯಲ್ಲಿ ಹೋರಾಟದ ಮುಂದಿನ ಹಂತಗಳ ಕುರಿತು ಚರ್ಚಿಸಲಾಗಿದ್ದು, ಜನಜಾಗೃತಿ ಕಾರ್ಯಕ್ರಮಗಳು, ರೈತರನ್ನು ಒಳಗೊಂಡ ಹೋರಾಟಗಳು ಹಾಗೂ ಸರ್ಕಾರದ ಮೇಲೆ ಒತ್ತಡ ಹೇರುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು.

ಕೃಷ್ಣಾ ಕೊಳ್ಳದ ಅಭಿವೃದ್ಧಿ ಹಾಗೂ ನೀರಿನ ನ್ಯಾಯಕ್ಕಾಗಿ ಸಂಘಟಿತ ಹೋರಾಟ ನಡೆಸುವ ಅಗತ್ಯವಿದೆ ಎಂದು ಸಮಿತಿ ಮುಖಂಡರು ತಿಳಿಸಿದರು.

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಬೇಡಿಕೆಯನ್ನು ಈಡೇರಿಸುವವರೆಗೆ ಹೋರಾಟ ಮುಂದುವರಿಸುವ ಸಂಕಲ್ಪವನ್ನು ಸಭೆಯಲ್ಲಿ ವ್ಯಕ್ತಪಡಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande