
ಬಳ್ಳಾರಿ, 25 ಜೂನ್ (ಹಿ.ಸ.) :
ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ‘ಮಿಷನ್ ಶಕ್ತಿ' ಯೋಜನೆಯಡಿ ಬಳ್ಳಾರಿ (ಗ್ರಾಮಾಂತರ) ವ್ಯಾಪ್ತಿಯಲ್ಲಿ ಹೊಸದಾಗಿ 06 ಅಂಗನವಾಡಿ ಕಂ-ಕ್ರಷ್ ಕೇಂದ್ರಗಳು ಮಂಜೂರಾಗಿವೆ. ಈ ಕೇಂದ್ರಗಳಲ್ಲಿ ಖಾಲಿ ಇರುವ ಕ್ರಷ್ ಕಾರ್ಯಕರ್ತೆ ಮತ್ತು ಕ್ರಷ್ ಸಹಾಯಕಿಯರ ಗೌರವ ಸೇವೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಪಡೆಯುವ ಮತ್ತು ಸಲ್ಲಿಸುವ ಸ್ಥಳ:
ಎಸ್ಪಿ ಸರ್ಕಲ್ ಹತ್ತಿರ ಇರುವ ಬಳ್ಳಾರಿ (ಗ್ರಾಮಾಂತರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 5.30 ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಜುಲೈ 18 ಅರ್ಜಿ ಸಲ್ಲಿಸಲು ಕೊನೆಯ ದಿನ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಕಚೇರಿಗೆ ಭೇಟಿ ನೀಡಿ, ನಿಗದಿಪಡಿಸಿದ ನಮೂನೆಯ ಅರ್ಜಿಗಳನ್ನು ಪಡೆದುಕೊಂಡು, ಸೂಕ್ತ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್