ಬಸ್ ನಿಲ್ದಾಣದ ಬಳಿ ತೆರೆದ ಚರಂಡಿ ; ನಗರಸಭೆ, ಕೆಎಸ್ಆರ್ಟಿಸಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
ಬಾಗಲಕೋಟೆ, 25 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ನಗರದ ಹಳೆ ಬಸ್ ನಿಲ್ದಾಣದ ಸಮೀಪ ಸಾರ್ವಜನಿಕರು ಪ್ರತಿದಿನ ಸಂಚರಿಸುವ ಪ್ರಮುಖ ರಸ್ತೆಯಲ್ಲಿಯೇ ಹಲವು ವರ್ಷಗಳಿಂದ ತೆರೆದ ಚರಂಡಿ ಸಮಸ್ಯೆ ಮುಂದುವರಿದಿದ್ದು, ಪ್ರಯಾಣಿಕರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಜನಸಂಚಾರ ಹೆಚ್ಚಿರು
ಚರಂಡಿ


ಬಾಗಲಕೋಟೆ, 25 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ನಗರದ ಹಳೆ ಬಸ್ ನಿಲ್ದಾಣದ ಸಮೀಪ ಸಾರ್ವಜನಿಕರು ಪ್ರತಿದಿನ ಸಂಚರಿಸುವ ಪ್ರಮುಖ ರಸ್ತೆಯಲ್ಲಿಯೇ ಹಲವು ವರ್ಷಗಳಿಂದ ತೆರೆದ ಚರಂಡಿ ಸಮಸ್ಯೆ ಮುಂದುವರಿದಿದ್ದು, ಪ್ರಯಾಣಿಕರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಜನಸಂಚಾರ ಹೆಚ್ಚಿರುವ ಈ ಪ್ರದೇಶದಲ್ಲಿ ಚರಂಡಿ ಮುಚ್ಚಳವಿಲ್ಲದೆ ತೆರೆದ ಸ್ಥಿತಿಯಲ್ಲಿದ್ದು, ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವುದು ಸಾರ್ವಜನಿಕರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಶಾಲಾ ಮಕ್ಕಳು, ವೃದ್ಧರು, ಮಹಿಳೆಯರು ಸೇರಿದಂತೆ ಪ್ರತಿದಿನ ಸಾವಿರಾರು ಜನರು ಈ ಮಾರ್ಗವನ್ನು ಬಳಸುತ್ತಿದ್ದು, ಸ್ವಲ್ಪ ಎಚ್ಚರ ತಪ್ಪಿದರೂ ಚರಂಡಿಗೆ ಬೀಳುವ ಅಪಾಯ ಎದುರಾಗಿದೆ.

ಮಳೆಗಾಲದಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಚರಂಡಿಯ ಕೊಳಕು ನೀರು ರಸ್ತೆಗೆ ಹರಿದು ದುರ್ವಾಸನೆ ಹಾಗೂ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹಲವು ವರ್ಷಗಳಿಂದ ಈ ಸಮಸ್ಯೆ ಇದ್ದರೂ ಸಂಬಂಧಪಟ್ಟ ಅಧಿಕಾರಿಗಳು ಶಾಶ್ವತ ಪರಿಹಾರಕ್ಕೆ ಮುಂದಾಗಿಲ್ಲ ಎಂಬುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಭಾಗವು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿರುವುದರಿಂದ ಪ್ರಯಾಣಿಕರ ಓಡಾಟ ಹೆಚ್ಚಾಗಿರುತ್ತದೆ. ಆದರೂ ಕೆಎಸ್ಆರ್ಟಿಸಿ ಡಿಪೋ ಅಧಿಕಾರಿಗಳು ಹಾಗೂ ಬಾಗಲಕೋಟೆ ನಗರಪಾಲಿಕೆ ಅಧಿಕಾರಿಗಳು ಸಮಸ್ಯೆಯನ್ನು ಗಮನಿಸದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ಯಾವುದೇ ದೊಡ್ಡ ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಂಡು ತೆರೆದ ಚರಂಡಿಗೆ ಸೂಕ್ತ ಮುಚ್ಚಳ ಅಳವಡಿಸಿ, ಸ್ವಚ್ಛತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ನಗರದ ಪ್ರಮುಖ ಭಾಗದಲ್ಲಿರುವ ಈ ಅವ್ಯವಸ್ಥೆಯನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂಬುದು ನಾಗರಿಕರ ಒತ್ತಾಯವಾಗಿದೆ. ಅಧಿಕಾರಿಗಳು ಇನ್ನೂ ನಿರ್ಲಕ್ಷ್ಯ ಮುಂದುವರಿಸಿದರೆ ಹೋರಾಟ ನಡೆಸುವ ಎಚ್ಚರಿಕೆಯನ್ನೂ ಸಾರ್ವಜನಿಕರು ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande