ಗೋಲಗುಂಬಜ್ ಎಕ್ಸ್ಪ್ರೆಸ್ ಪುನರಾರಂಭಕ್ಕೆ ಆಗ್ರಹ ; ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಪ್ರತಿಭಟನೆ
ಬಾಗಲಕೋಟೆ, 25 ಜೂನ್ (ಹಿ.ಸ.) : ಆಂಕರ್ : ಗೋಲಗುಂಬಜ್ ರೈಲು ಸಂಚಾರವನ್ನು ಮೊದಲಿನಂತೆಯೇ ಪುನರಾರಂಭಿಸಬೇಕು ಸೇರಿದಂತೆ ವಿವಿಧ ರೈಲ್ವೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ಬಾಗಲಕೋಟೆ ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲ
ರೈಲ್ವೇ


ಬಾಗಲಕೋಟೆ, 25 ಜೂನ್ (ಹಿ.ಸ.) :

ಆಂಕರ್ : ಗೋಲಗುಂಬಜ್ ರೈಲು ಸಂಚಾರವನ್ನು ಮೊದಲಿನಂತೆಯೇ ಪುನರಾರಂಭಿಸಬೇಕು ಸೇರಿದಂತೆ ವಿವಿಧ ರೈಲ್ವೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ಬಾಗಲಕೋಟೆ ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಮಿತಿ ಸದಸ್ಯರು, ಬಾಗಲಕೋಟೆ ಜಿಲ್ಲೆ ಹಾಗೂ ಸುತ್ತಮುತ್ತಲಿನ ಸಾವಿರಾರು ಪ್ರಯಾಣಿಕರಿಗೆ ಅನುಕೂಲವಾಗಿದ್ದ ಗೋಲಗುಂಬಜ್ ರೈಲು ಸೇವೆಯನ್ನು ಸ್ಥಗಿತಗೊಳಿಸಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಿಗಳು ಹಾಗೂ ದೂರ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಈ ರೈಲು ಪ್ರಮುಖ ಸಂಪರ್ಕ ಕೊಂಡಿಯಾಗಿತ್ತು. ಹೀಗಾಗಿ ರೈಲನ್ನು ಮತ್ತೆ ಅದೇ ಮಾರ್ಗದಲ್ಲಿ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬಾಗಲಕೋಟೆ ರೈಲ್ವೆ ನಿಲ್ದಾಣದ ಅಭಿವೃದ್ಧಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಕಲ್ಪಿಸುವುದು, ಪ್ರಯಾಣಿಕರ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಮಿತಿ ರೈಲ್ವೆ ಇಲಾಖೆಯ ಮುಂದಿಟ್ಟಿತು.

ರೈಲ್ವೆ ಸಂಪರ್ಕವು ಜಿಲ್ಲೆಯ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಜನರ ಬಹುದಿನಗಳ ಬೇಡಿಕೆಗಳನ್ನು ನಿರ್ಲಕ್ಷಿಸದೆ ಕೇಂದ್ರ ರೈಲ್ವೆ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.

ಪ್ರತಿಭಟನೆಯಲ್ಲಿ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande