ರಾಜ್ಯದಲ್ಲಿ ಇಂದು ಮಳೆ ಚುರುಕು ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ನಾನಾ
ರಾಜ್ಯದಲ್ಲಿ ಇಂದು ಮಳೆ ಚುರುಕು ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ


ಬೆಂಗಳೂರು, 25 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದಾದ್ಯಂತ ಇಂದು ಹಲವೆಡೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ರಾಜ್ಯದ ನಾನಾ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಹವಾಮಾನ ಮುನ್ಸೂಚನೆಯ ಪ್ರಕಾರ, ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು-ಸಿಡಿಲಿನೊಂದಿಗೆ ಗಾಳಿ ವೇಗ ಹೆಚ್ಚಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇನ್ನೊಂದೆಡೆ, ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರ ತೀರ ಪ್ರದೇಶಗಳಲ್ಲಿ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆಯೂ ಇರುವುದರಿಂದ ಮೀನುಗಾರರು ಮತ್ತು ಸಮುದ್ರಕ್ಕೆ ತೆರಳುವವರು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯ ಪರಿಣಾಮವಾಗಿ ಕೆಲವೆಡೆ ತಾಪಮಾನದಲ್ಲಿ ಇಳಿಕೆ ಕಂಡು ಬರುವ ಸಾಧ್ಯತೆ ಇದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande