ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಿವು ಕಾರ್ಯಕ್ರಮಗಳಿಗೆ ವೇಗ
ಧಾರವಾಡ, 25 ಜೂನ್ (ಹಿ.ಸ.): ಆ್ಯಂಕರ್: ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಧಾರವಾಡ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯ ವಿವಿಧ ಸ್
Meeting


ಧಾರವಾಡ, 25 ಜೂನ್ (ಹಿ.ಸ.):

ಆ್ಯಂಕರ್:

ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಧಾರವಾಡ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ (ಎಸ್ವಿಇಇಪಿ) ನೋಡಲ್ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಮತದಾರರ ಜಾಗೃತಿ ಅಭಿಯಾನ ಕುರಿತಂತೆ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಹಾಗೂ ಕಾಲೇಜು ಶಿಕ್ಷಣ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳ ಮೂಲಕ ಕೈಗೊಳ್ಳಬೇಕಾದ ಜಾಗೃತಿ ಕಾರ್ಯಕ್ರಮಗಳ ಕುರಿತು ಸಮಾಲೋಚನೆ ನಡೆಯಿತು. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳ ಅನುಸಾರವಾಗಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಲು, ತಿದ್ದುಪಡಿ ಮಾಡಿಸಿಕೊಳ್ಳಲು ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಪ್ರೇರೇಪಿಸುವಂತೆ ನಿರ್ದೇಶನ ನೀಡಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande